
ಮರಣದ ನಂತರವೂ ಜೀವಿಸಿರುವ ಪುನೀತ್: ಡಾ.ದಾಕ್ಷಾಯಿಣಿ
ಮೈಸೂರು:ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್ ರಾಜ್‌ಕುಮಾರ್ ಅವರದ್ದಾಗಿತ್ತು ಎಂದು ಕೆ ಆರ್ ಆಸ್ಪತ್ರೆಯ ಡೀನ್ ಡಾ.ದಾಕ್ಷಾಯಿಣಿ ಅಭಿಪ್ರಾಯಪಟ್ಟರು.
ನಗರದ ಕೆ ಆರ್ ಆಸ್ಪತ್ರೆಯ ರೋಗಿಗಳಿಗೆ ಪುನೀತ್ ರಾಜಕುಮಾರ್ ಅಭಿಮಾನಿ ಬಳಗ ಹಾಗೂ ಪ್ರಜ್ಞಾವಂತ ನಾಗರಿಕ ವೇದಿಕೆ ಹಣ್ಣು ಹಂಪಲು ಹಾಗೂ ಸಾರ್ವಜನಿಕರಿಗೆ ಮಜ್ಜಿಗೆ ವಿತರಿಸುವ ಮೂಲಕ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರವರ ಹುಟ್ಟುಹಬ್ಬಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮನುಷ್ಯ ಎಷ್ಟು ಶ್ರೀಮಂತ ಎನ್ನುವ ಕಾಲ ಬದಲಾಗಿದೆ. ಎಷ್ಟು ಆರೋಗ್ಯವಂತನಾಗಿ ಜೀವನ ಸಾಗಿಸುತ್ತಿದ್ದಾನೆ ಎನ್ನುವುದು ಮುಖ್ಯವಾಗಿದೆ. ಪ್ರತಿಯೊಬ್ಬರು ತಮ್ಮ ಆರೋಗ್ಯ ಬಗ್ಗೆ ಹೆಚ್ಚು ಕಾಳಜಿ ವಹಿಸಿಕೊಳ್ಳಬೇಕು, ತಿಂಗಳಿಗೊಮ್ಮೆ ಆದರೂ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯವಂತ ಜೀವನ ನಡೆಸಬೇಕು ಎಂದು ಹೇಳಿದರು.
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಹೇಮಾ ನಂದೀಶ್ ಮಾತನಾಡಿ, ಪುನೀತ್ ಸಮಾಜ ಸೇವೆಯಲ್ಲೂ ತೊಡಗಿದ್ದರು. ಅವರ ಅಭಿಮಾನಿಗಳು ಅವರಂತೆ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಕೈಗೊಳ್ಳಬೇಕು. ಅವರು ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಳ್ಳೆಯ ಸಂದೇಶಗಳನ್ನು ನೀಡುತ್ತಿದ್ದರಲ್ಲದೇ, ಎಲೆಮರೆಯ ಕಾಯಿಯಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಇಂದಿನ ಯುವ ಪೀಳಿಗೆಗೆ ಆದರ್ಶ ಪ್ರಾಯರಾಗಿದ್ದಾರೆಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಮೆಡಿಕಲ್ ಸೂಪರಿಟೆಂಡೆಂಟ್ ಡಾ. ರಾಜೇಂದ್ರ, ಕೆ ಆರ್ ಆಸ್ಪತ್ರೆಯ ಆರ್ ಎಂ ಓ ಡಾ.ಶಿವರಾಮಕೃಷ್ಣ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಸಮಾಜ ಸೇವಕರಾದ ಕಾರ್ತಿಕ್ ಗೌಡ (ಕೆ.ಕೆ) , ಸಚಿಂದ್ರ, ರಾಕೇಶ್, ಸೂರಜ್ , ಸದಾಶಿವ, ಚಂದ್ರು, ಶಿವ ಗೌಡ, ಕೌಶಿಕ್ ಗೌಡ, ಸಾಗರ್, ಶಾಂತರಾಜು ಇನ್ನಿತರರು ಇದ್ದರು