ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ

Spread the love

ಮಲಬಾರ್ ಗೋಲ್ಡ್ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಒಂಭತ್ತು ದಿನಗಳ ಕಾಲ ಹಮ್ಮಿಕೊಳ್ಳಲಾದ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ಚಾಲನೆ ನೀಡಲಾಯಿತು. ಪ್ರದರ್ಶನವನ್ನು ಉಡುಪಿ ತುಳುಕೂಟದ ಮಾಜಿ ಉಪಾಧ್ಯಕ್ಷೆ ವಿದ್ಯಾ ಸರಸ್ವತಿ ಉದ್ಘಾಟಿಸಿದರು. ಆಶಾ ಆರ್.ಶೆಟ್ಟಿ, ಶಾಲೆಟ್ ವಾಲ್ಟರ್ ಮಥಯಾಸ್, ಲಕ್ಷ್ಮಿ ಅಂಕಿತ್ ಆಚಾರ್ಯ, ನೇಹಾ ಸತೀಶ್ ಚಿನ್ನಾಭರಣಗಳನ್ನು ಅನಾವರಣಗೊಳಿಸಿ, ಶುಭ ಹಾರೈಸಿದರು.

ಜ.21ರವರೆಗೆ ನಡೆಯುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳು ಪ್ರದರ್ಶನ ದಲ್ಲಿವೆ. ‘ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭರಣಗಳಿದ್ದು, ’ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ. ’ಪ್ರಶಿ’ಯದಲ್ಲಿ ರುಬಿ, ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು, ’ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ.

‘ಎರ’ ಆನ್ಕಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಈ ಪ್ರದರ್ಶನದ ವಿಶೇಷವಾಗಿದೆ. ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ , ವಿನಿಮಯದಲ್ಲಿ ಶೂನ್ಯ ಕಡಿತ, ಬೈಬ್ಯಾಕ್ ಗ್ಯಾರಂಟಿ, ಉಚಿತ ವಿಮೆ, ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು, 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವಿಶೇಷತೆಗಳಾಗಿವೆ.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಮ್ಯಾನೇಜರ್ ಪುರಂದರ ತಿಂಗಳಾಯ, ಗೆಸ್ಟ್ ಮೆನೇಜರ್ ರಾಘವೇಂದ್ರ ನಾಯಕ್, ಅಸಿಸ್ಟೆಂಟ್ ಮಾರ್ಕೆಟಿಂಗ್ ಮ್ಯಾನೇಜರ್ ತಂಝೀಮ್ ಶಿರ್ವ ಹಾಗೂ ಸಿಬ್ಬಂದಿಗಳು ಹಾಜರಿದ್ದರು. ಸಿಬ್ಬಂದಿ ವಿಘ್ನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


Spread the love