ಮಲ್ಪೆ: ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ

Spread the love

ಮಲ್ಪೆ: ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ

ಉಡುಪಿ: ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ನೇಜಾರು ಸಮೀಪದ ತೃಪ್ತಿ ನಗರದಲ್ಲಿ ಭಾನುವಾರ ಸಂಭವಿಸಿದೆ.

ಮೃತರನ್ನು ಹಸೀನಾ (46), ಅಫ್ನಾನ್ (23), ಅಜ್ಞಾಝ್ (21) ಮತ್ತು ಆಸಿಂ (12) ಎಂದು ಗುರುತಿಸಲಾಗಿದೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೂರಿಯಿಂದ ಚುಚ್ಚಿ ಕೊಲೆಗೈದು ದುಷ್ಕರ್ಮಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಸ್ಥಳಕ್ಕೆ ಜಿಲ್ಲಾ ಎಸ್ಪಿ ಡಾ. ಕೆ ಅರುಣ್, ಡಿವೈಎಸ್ಪಿ ದಿನಕರ್ ಹಾಗೂ ಮಲ್ಪೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಉಡುಪಿ ಎಸ್ಪಿ ಡಾ. ಅರುಣ್ ಕೆ ನೇಜಾರಿನ ಸಮೀಪಒಂದೇ ಕುಟುಂಬದ ನಾಲ್ವರನ್ನು ಇರಿದು ಕೊಲೆ ಮಾಡಲಾಗಿದೆ. ಇನ್ನೊಬ್ಬರಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ ಹಸೀನಾ ಮತ್ತವರ ಮೂವರು ಮಕ್ಕಳನ್ನು ಕೊಲೆ ಮಾಡಲಾಗಿದೆ. ನಾವು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ್ದು ತನಿಖೆ ಮಾಡಿ ಶೀಘ್ರ ಇದರ ಹಿಂದಿನ ಕಾರಣ ಪತ್ತೆ ಹಚ್ಚುತ್ತೇವೆ . ಸದ್ಯಮನೆಯೊಳಗೆ ಯಾವುದೇ ಸೊತ್ತುಗಳು ಕಳವಾದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ. ಬೆಳಿಗ್ಗೆ ಹತ್ತು ಗಂಟೆ ಹೊತ್ತಿಗೆ ನಮಗೆ ಮಾಹಿತಿ ಬಂದಿದ್ದು, ಮಾಹಿತಿ ಬಂದ ತಕ್ಷಣ ಬಂದು ಸ್ಥಳ ಪರಿಶೀಲನೆ ನಡೆಸಿ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದೇವೆ. ಕೊಲೆಗೆ ಏನು ಕಾರಣ ಎಂದು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದರು.

 

 


Spread the love

Leave a Reply