ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ; ಜ.5 ರಂದು ಉಡುಪಿಗೆ ಗೃಹಸಚಿವ ಎಮ್ ಬಿ ಪಾಟೀಲ್

Spread the love

ಮಲ್ಪೆ ಮೀನುಗಾರರ ನಾಪತ್ತೆ ಪ್ರಕರಣ; ಜ.5 ರಂದು ಉಡುಪಿಗೆ ಗೃಹಸಚಿವ ಎಮ್ ಬಿ ಪಾಟೀಲ್

ಉಡುಪಿ: ಉಡುಪಿಯ ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ “ಸುವರ್ಣ ತ್ರಿಭುಜ” ಎಂಬ ಬೋಟ್ ನಾಪತ್ತೆಯಾಗಿದ್ದು ಇದರ ಪತ್ತೆ ಹಚ್ಚುವ ಕಾರ್ಯ ಹಾಗೂ ಕೈಗೊಳ್ಳ ಬೇಕಾದ ಕ್ರಮಗಳ ಕುರಿತು ಚರ್ಚಿಸುವ ಸಲುವಾಗಿ ರಾಜ್ಯ ಗೃಹ ಸಚಿವ ಎಂ.ಬಿ. ಪಾಟೀಲ್ ಜನವರಿ 5 ರಂದು ಉಡುಪಿ ಪ್ರವಾಸ ಕೈಗೊಳ್ಳಲಿದ್ದಾರೆ.

ಶನಿವಾರ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ರಸ್ತೆ ಮಾರ್ಗ ಮೂಲಕ ಹೊರಟು ಮಧ್ಯಾಹ್ನ 2.30 ಗಂಟೆಗೆ ಉಡುಪಿ ಪ್ರವಾಸಿ ಮಂದಿರಕ್ಕೆ ಆಗಮಿಸಲಿರುವ ಸಚಿವರು ಮಧ್ಯಾಹ್ನ 3-30-4.30ರ ವರೆಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಕರಾವಳಿ ಕಾವಲು ಪಡೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

ಬಳಿಕ 4.45 ರಿಂದ 5.30 ರ ವರೆಗೆ ಮೀನುಗಾರ ಸಂಘದ ಪದಾಧಿಕಾರಿಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಭೇಟಿಯಾಗಿ ನಾಪತ್ತೆಯಾದ ಮೀನುಗಾರರ ಬಗ್ಗೆ ಪತ್ತೆ ಕಾರ್ಯ ನಡೆಸುವ ಕುರಿತು ಸಭೆ ನಡೆಸಲಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ 7.30 ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳಿ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


Spread the love