ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಕಾಳಿಕಾಂಬಾ ದೇವಸ್ಥಾನದಲ್ಲಿ ಪ್ರಾರ್ಥನೆ

ಮಳೆಗಾಗಿ ಶಾಸಕ ಡಿ ವೇದವ್ಯಾಸ ಕಾಮತ್ ಕಾಳಿಕಾಂಬಾ ದೇವಸ್ಥಾನದಲ್ಲಿ ಪ್ರಾರ್ಥನೆ

ಮಂಗಳೂರು: ಮಂಗಳೂರು ಮಹಾನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಶೀಘ್ರದಲ್ಲಿ ಮಳೆ ಬಂದು ನಾಗರಿಕರಿಗೆ ಅತ್ಯವಶ್ಯಕವಾದ ನೀರು ಸಿಗುವಂತಾಗಲು ದೇವರು ಅನುಗ್ರಹಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ಕಾಳಿಕಾಂಬಾ ದೇವಸ್ಥಾನದಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭ ಶಾಸಕರೊಂದಿಗೆ ದೇವಸ್ಥಾನದ ಮೊಕ್ತೇಸರ ಕೇಶವ ಆಚಾರ್ಯ, ಪ್ರಧಾನ ಅರ್ಚಕ ಧನಂಜಯ ಪುರೋಹಿತ್, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಧನಂಜಯ ಪಾಲ್ಕೆ, ಮಾಜಿ ಮನಪಾ ಸದಸ್ಯರಾದ ವೆಂಕಟೇಶ್ ಆಚಾರ್ಯ, ಜಯಂತಿ ಆಚಾರ್, ಪೂರ್ಣಿಮಾ, ಬಿಜೆಪಿ ಮುಖಂಡರಾದ ವಸಂತ ಜೆ ಪೂಜಾರಿ, ಮೋಹನ್ ಆಚಾರ್, ದೇವಸ್ಥಾನದ ವಿವಿಧ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.