ಮಸೂದ್ ಕೊಲೆ ಪ್ರಕರಣ: 8ನೇ ಆರೋಪಿ ಭಾಸ್ಕರ್ ಕೆಎಂ ಗೆ ಷರತ್ತುಬದ್ಧ ಜಾಮೀನು

Spread the love

ಮಸೂದ್ ಕೊಲೆ ಪ್ರಕರಣ: 8ನೇ ಆರೋಪಿ ಭಾಸ್ಕರ್ ಕೆಎಂ ಗೆ ಷರತ್ತುಬದ್ಧ ಜಾಮೀನು

ಮಂಗಳೂರು: ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ 8ನೇ ಆರೋಪಿಯಾಗಿರುವ ಭಾಸ್ಕರ್ ಕೆ.ಎಂ. ಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರುಗೊಳಿಸಿರುವುದಾಗಿ ತಿಳಿದುಬಂದಿದೆ.

2022ರ ಜು.19 ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಪ್ರಕರಣದ 8ನೇ ಆರೋಪಿಯಾಗಿರುವ ಭಾಸ್ಕರ ಕೆ. ಎಂ. ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದು ಆ.3 ರಂದು ಷರತ್ತುಬದ್ಧ ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದುಬಂದಿದೆ.


Spread the love