Home Mangalorean News Kannada News ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಪ್ರಬಂಧ ಸ್ಪರ್ಧೆ ಅಕ್ಟೋಬರ್ 25 ಕ್ಕೆ ಮುಂದೂಡಿಕೆ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಪ್ರಬಂಧ ಸ್ಪರ್ಧೆ ಅಕ್ಟೋಬರ್ 25 ಕ್ಕೆ ಮುಂದೂಡಿಕೆ

Spread the love

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಪ್ರಬಂಧ ಸ್ಪರ್ಧೆ ಅಕ್ಟೋಬರ್ 25 ಕ್ಕೆ ಮುಂದೂಡಿಕೆ

ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಅಂಗವಾಗಿ ಅಕ್ಟೋಬರ್ 11ರಂದು ಉಡುಪಿ ಶ್ಯಾಮಿಲಿ ಸಭಾಂಗಣದಲ್ಲಿ ಆಯೋಜಿಸಿದ್ದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಅಕ್ಟೋಬರ್ 25 ಕ್ಕೆ ಮುಂದೂಡಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18 ರ ವರೆಗೆ ವಿಸ್ತರಿಸಿದ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಲು ಅನಾನುಕೂಲತೆ ಉಂಟಾಗುವ ಬಗ್ಗೆ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ಸ್ಪರ್ಧೆಯನ್ನು ಮುಂದೂಡಲಾಗಿದೆ.

ಅಕ್ಟೋಬರ್ 25 ಶನಿವಾರ ಬೆಳಿಗ್ಗೆ 9.30ಕ್ಕೆ ಉಡುಪಿ ಶ್ಯಾಮಿಲಿ ಸಭಾಂಗಣದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version