ಮಹಾಲಕ್ಷ್ಮೀ ಬ್ಯಾಂಕಿನ ವತಿಯಿಂದ ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿಗೆ ಸನ್ಮಾನ

Spread the love

ಮಹಾಲಕ್ಷ್ಮೀ ಬ್ಯಾಂಕಿನ ವತಿಯಿಂದ ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿಗೆ ಸನ್ಮಾನ

ಉಡುಪಿ: ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ಲಿ., ಉಡುಪಿ ಇದರ 2021-22ರ ಆರ್ಥಿಕ ವರ್ಷದ 44ನೇ ವಾರ್ಷಿಕ ಮಹಾಸಭೆಯು ದಿನಾಂಕ 09-08-2022 ರಂದು ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಎ ಸುವರ್ಣರವರ ಅಧ್ಯಕ್ಷತೆಯಲ್ಲಿ ಉಡುಪಿ ಪುರಭವನದಲ್ಲಿ ಜರುಗಿತು.

ಬ್ಯಾಂಕಿನ ಅಧ್ಯಕ್ಷರಾದ  ಯಶ್‍ಪಾಲ್ ಎ ಸುವರ್ಣರವರು ಸರ್ವಸದಸ್ಯರನ್ನು ಸ್ವಾಗತಿಸಿ, ಮಹಾಲಕ್ಷ್ಮೀ ಕೋ ಓಪರೇಟಿವ್ ಬ್ಯಾಂಕ್ ನಿರಂತರ 13 ವರ್ಷಗಳಿಂದ ಶೇ. 18 ಡಿವಿಡೆಂಡ್ ಘೋಷಣೆಯ ಮೂಲಕ ಕರಾವಳಿ ಭಾಗದ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬ್ಯಾಂಕು ಎಲ್ಲಾ ಕ್ಷೇತ್ರಗಳಲ್ಲೂ ಗಣನೀಯ ಪ್ರಗತಿ ಸಾಧಿಸಿದ್ದು, ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಗ್ರಾಹಕ ಸ್ನೇಹಿಯಾಗಿ ವ್ಯವಹಾರ ನಡೆಸುತ್ತಿದೆ. ವಿಶೇಷವಾಗಿ ಸಣ್ಣ ಉದ್ದಿಮೆದಾರರಿಗೆ 8% ಬಡ್ಡಿದರದಲ್ಲಿ ವಿಶೇಷ ಮಾನ್ಸೂನ್ ಸಾಲ ಯೋಜನೆ, ಮಹಿಳಾ ಮೀನುಗಾರರ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿದರದ ಸಾಲ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಬ್ಸಿಡಿಯನ್ನು ನಮ್ಮ ಬ್ಯಾಂಕಿನ ಗ್ರಾಹಕರ ಖಾತೆಗೆ ಜಮೆಯಾಗುವಂತೆ ಮಾಡಲು ಕಾರ್ಯಪ್ರವೃತ್ತವಾಗಿರುವುದಾಗಿ ತಿಳಿಸಿದರು.

ಮಹಾಲಕ್ಷ್ಮೀ ಪ್ಲಾಟಿನಂ ಉಳಿತಾಯ ಖಾತೆಯಲ್ಲಿ ಕನಿಷ್ಠ 5 ಲಕ್ಷ ಠೇವಣಾತಿಗಾಗಿ ಶೇ.4.75, ಗೋಲ್ಡ್ ಉಳಿತಾಯ ಖಾತೆಯಲ್ಲಿ ಕನಿಷ್ಠ 2 ಲಕ್ಷ ಠೇವಣಾತಿಗಾಗಿ ಶೇ.4.25 ಬಡ್ಡಿದರ ಹಾಗೂ ಸಂಘ ಸಂಸ್ಥೆಗಳಿಗೆ 0.5% ಹೆಚ್ಚುವರಿ ಬಡ್ಡಿ ನೀಡುತ್ತಿದ್ದು, ವಿದ್ಯಾರ್ಥಿಗಳಿಗಾಗಿ ಶೂನ್ಯ ಬ್ಯಾಲೆನ್ಸ್ “ಮಹಾಲಕ್ಷ್ಮೀ ವಿದ್ಯಾ ಸಿರಿ” ಉಳಿತಾಯ ಖಾತೆಯ ಸೌಲಭ್ಯ ಒದಗಿಸಲಾಗಿದ್ದು, ಮುಂದಿನ ದಿನಗಳಲ್ಲಿ ಬ್ಯಾಂಕಿನ ಕಾರ್ಯಕ್ಷೇತ್ರವನ್ನು ಕರ್ನಾಟಕ ರಾಜ್ಯದಾದ್ಯಂತ ವಿಸ್ತರಿಸುವ ಬಗ್ಗೆ ಆಡಳಿತ ಮಂಡಳಿ ಕಾರ್ಯಪ್ರವೃತ್ತವಾಗಿರುವುದಾಗಿ ಹೇಳಿದರು.

ವರದಿ ವರ್ಷದಲ್ಲಿ ಆದಾಯ ತೆರಿಗೆಗೆ ಹಾಗೂ ನಿಯಮದಂತೆ ಇತರ ಸಲುವಳಿಗಳಿಗೆ ಅನುವು ಮಾಡುವ ಮೊದಲು ರೂ. 13.38 ಕೋಟಿ ಲಾಭ ಗಳಿಸಿದ್ದು, ಹಾಗೂ ಅನುವು ಮಾಡಿದ ನಂತರ ರೂ. 5.58 ಕೋಟಿ ನಿವ್ವಳ ಲಾಭ ಗಳಿಸಿದ್ದು, 2021-22ರ ವರ್ಷಾಂತ್ಯಕ್ಕೆ ಬ್ಯಾಂಕಿನ ಠೇವಣಿಯು ರೂ. 367 ಕೋಟಿಗೆ ಹಾಗೂ ಸಾಲ ಮತ್ತು ಮುಂಗಡವು ರೂ. 273 ಕೋಟಿಗೆ ತಲುಪಿದ್ದು ಬ್ಯಾಂಕಿನ ಒಟ್ಟು ವಹಿವಾಟು ರೂ.6302.75 ಕೋಟಿ, ದುಡಿಯುವ ಬಂಡವಾಳವು ರೂ. 62,582.79 ಲಕ್ಷಕ್ಕೆ ಏರಿಕೆಯಾಗಿದ್ದು, ಪ್ರಸ್ತುತ ರೂ. 401 ಕೋಟಿ ಠೇವಣಿ, ರೂ. 312 ಕೋಟಿ ಸಾಲ ಮತ್ತು ಮುಂಗಡದೊಂದಿಗೆ ಸಂಪನ್ಮೂಲ ನಿರ್ವಹಣೆಯಲ್ಲಿ ಉತ್ತಮ ಸ್ಥಿತಿಯಲ್ಲಿರುವುದನ್ನು ವಿವರಿಸಲಾಯಿತು.

ಶಾಸನಬದ್ಧ ಲೆಕ್ಕಪರಿಶೋಧಕರು ಬ್ಯಾಂಕನ್ನು ‘ಎ’ ದರ್ಜೆಯಲ್ಲಿ ವರ್ಗೀಕೃತವಾಗಿದ್ದು, ಬ್ಯಾಂಕಿನ ಸದಸ್ಯರಿಗೆ ಶೇ.18 ಡಿವಿಡೆಂಡ್‍ನ್ನು ಸರ್ವಾನುಮತದಿಂದ ಘೋಷಿಸಿದ್ದು ಬ್ಯಾಂಕಿನ ಅಭಿವೃದ್ಧಿಗೆ ಸಹಕರಿಸಿದವರಿಗೆ ಹಾಗೂ ಮಹಾಸಭೆಯಲ್ಲಿ ವ್ಯಕ್ತವಾದ ಅಭಿವೃದ್ಧಿಪರ  ಸಲಹೆ ಸೂಚನೆಗಳಿಗೆ ಕೃತಜ್ಞತೆಯನ್ನು ಸಲ್ಲಿಸಿ, ಮುಂಬರುವ ವರ್ಷಗಳಲ್ಲಿಯೂ ಸಹ ಬ್ಯಾಂಕಿನ ಅಭಿವೃದ್ಧಿಗೆ ಎಲ್ಲರ ಸಹಕಾರವನ್ನು ಅಧ್ಯಕ್ಷರು ಕೋರಿದರು.

ಬ್ಯಾಂಕಿನ ನಿರಂತರ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬ್ಯಾಂಕಿನ ಸಾಧನೆಯ ಬಗ್ಗೆ ಸದಸ್ಯರು ಸಭೆಯಲ್ಲಿ ಪ್ರಶಂಸೆ ವ್ಯಕ್ತಪಡಿಸಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಕಾಮನ್‍ವೆಲ್ತ್ ಗೇಮ್ಸ್ ಪದಕ ವಿಜೇತ ಗುರುರಾಜ್ ಪೂಜಾರಿ, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ನೂತನ ಅಧ್ಯಕ್ಷರಾದ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ. ನಿರ್ದೇಶಕರಾದ ಶ್ರೀ ಮಂಜುನಾಥ ಎಸ್. ಕೆ., ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದ ರಾಷ್ಡ್ರೀಯ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಘ ಸಾಧನಾ ಪ್ರಶಸ್ತಿ ವಿಜೇತ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ರಾಮಚಂದ್ರ ಕುಂದರ್, ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘ, ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ 625 ಅಂಕಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿ ಪುನೀತ್ ನಾಯ್ಕ್, ಕಾನೂನು ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್ಯಾಂಕ್ ಹಾಗೂ ಗೋಲ್ಡ್ ಮೆಡಲ್ ವಿಜೇತೆ ಕು. ನಮ್ರತಾ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಅಜಾದಿ ಕಾ ಅಮೃತ ಮಹೋತ್ಸವ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಗುರುರಾಜ್ ಪೂಜಾರಿ ಯವರಿಗೆ ಬ್ಯಾಂಕಿನ ಅಧ್ಯಕ್ಷರಾದ ಯಶ್‍ಪಾಲ್ ಸುವರ್ಣ ರಾಷ್ಟ್ರ ಧ್ವಜ ನೀಡಿ ಶುಭ ಹಾರೈಸಿದರು.

ಸಮಾರಂಭದಲ್ಲಿ ನಾಡೋಜ ಡಾ| ಜಿ. ಶಂಕರ್, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ   ಜಯ ಸಿ. ಕೋಟ್ಯಾನ್, ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಆನಂದ ಸಿ. ಕುಂದರ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಮತ್ಸ್ಯೋದ್ಯಮಿಗಳಾದ ಹರಿಯಪ್ಪ ಕೋಟ್ಯಾನ್, ಅನಂದ ಪಿ. ಸುವರ್ಣ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಡಾ| ರೋಷನ್ ಕುಮಾರ್ ಶೆಟ್ಟಿ, ಬ್ಯಾಂಕಿನ ನಿರ್ದೇಶಕರಾದ ವೆಂಕಟರಮಣ ಕಿದಿಯೂರು, ವಾಸುದೇವ ಸಾಲ್ಯಾನ್, ಶಶಿಕಾಂತ ಬಿ ಕೋಟ್ಯಾನ್, ಹೇಮನಾಥ ಜೆ ಪುತ್ರನ್, ಶೋಭೇಂದ್ರ ಸಸಿಹಿತ್ಲು, ಕೆ ಸಂಜೀವ ಶ್ರೀಯಾನ್, ರಾಮ ನಾಯ್ಕ್ ಎಚ್, ವಿನಯ ಕರ್ಕೇರ, ನಾರಾಯಣ ಟಿ ಅಮೀನ್, ಸುರೇಶ್ ಬಿ ಕರ್ಕೇರ, ಬಿ ಬಿ ಕಾಂಚನ್, ಶಿವರಾಮ ಕುಂದರ್,  ವನಜಾ ಜೆ ಪುತ್ರನ್, ವೃತ್ತಿಪರ ನಿರ್ದೇಶಕರಾದ  ಮಂಜುನಾಥ ಎಸ್ ಕೆ, ಹಾಗೂ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕರಾದ  ಜಗದೀಶ್ ಮೊಗವೀರ ಉಪಸ್ಥಿತರಿದ್ದರು


Spread the love