
ಮಹಿಳೆಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಆರೋಪಿ
ಹನೂರು: ಮಹಿಳೆಯೊಬ್ಬಳ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ವ್ಯಕ್ತಿಯೋರ್ವ ತಾನು ಕೂಡ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಗಮಲೆ ಗ್ರಾಮದಲ್ಲಿ ನಡೆದಿದೆ.
ಹನೂರು ತಾಲೂಕಿನ ನಾಗಮಲೆ ಗ್ರಾಮದ ಲಕ್ಷ್ಮೀ( 35) ಮೃತ ದುರ್ದೈವಿ. ತಮಿಳುನಾಡಿನ ಧರ್ಮಪುರಿ ಜಿಲ್ಲೆಯ ಮುನಿರಾಜ್ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.
ಲಕ್ಷ್ಮೀ ಮೂಲತಃ ತಮಿಳುನಾಡಿನ ಪೆನ್ನಾಗರಂ ನಿವಾಸಿ ಲಕ್ಷ್ಮೀಯನ್ನು ಕಳೆದ 7 ತಿಂಗಳ ಹಿಂದೆ ನಾಗಮಲೆ ಗ್ರಾಮದ ರಮೇಶ್ ಎಂಬಾತ ಕೂಡಾವಳಿ ವಿವಾಹ ಮಾಡಿಕೊಂಡು ನಾಗಮಲೆಗೆ ಕರೆತಂದಿದ್ದ. ಮಂಗಳವಾರ ರಮೇಶ್ ಬೇರೆ ಊರಿಗೆ ಹೋಗಿದ್ದ ವೇಳೆ ಆಗಮಿಸಿದ ಆರೋಪಿ ಮುನಿರಾಜು ಲಕ್ಷ್ಮಿಯನ್ನು ಕೊಂದು ತಾನೂ ಬೇವಿನ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನು ಲಕ್ಷ್ಮೀಯನ್ನು ಕೊಲೆ ಮಾಡಿ ಫೇಸ್ ಬುಕ್ ಲೈವ್ ಮಾಡಿರುವ ಪಾಗಲ್ ಪ್ರಿಯಕರ ತನ್ನನ್ನು ಕೊಲೆಗಾರನನ್ನಾಗಿಸಿದೆಯಲ್ಲಾ ಲಕ್ಷ್ಮೀ, ತಾನೇ ನಿನ್ನನ್ನು ಕೊಲೆ ಮಾಡಿದೆನ್ನಲ್ಲಾ, ನಿನ್ನ ರಕ್ತವನ್ನು ಕಾಣಲು ನನಗಾಗುತ್ತಿಲ್ಲ ಎಂದು ಅಳುತ್ತಾ ವೀಡಿಯೋ ಮಾಡಿದ್ದಾನೆ.
ಮೇಲ್ನೋಟಕ್ಕೆ ವಿವಾಹೇತರ ಸಂಬಂಧವೇ ಇದಕ್ಕೆ ಕಾರಣ ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.