Home Mangalorean News Kannada News ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವುದು ಖಂಡನೀಯ – ಹಬೀಬ್ ಆಲಿ

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವುದು ಖಂಡನೀಯ – ಹಬೀಬ್ ಆಲಿ

Spread the love

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿರುವುದು ಖಂಡನೀಯ – ಹಬೀಬ್ ಆಲಿ

ಉಡುಪಿ: ಮಲ್ಪೆಯಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆಗೈದ ಘಟನೆ ಖಂಡನೀಯವಾಗಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ರ ಕೈಗೊಳ್ಳಲು ಕೆಪಿಸಿಸಿ ಸಂಯೋಜಕರಾದ ಹಬೀಬ್ ಅಲಿ ರವರು ಆಗ್ರಹಿಸಿದ್ದಾರೆ.

ಮಹಿಳೆಯು ಮೀನು ಕದ್ದ ಆರೋಪದಡಿಯಲ್ಲಿ ಮರಕ್ಕೆ ಕಟ್ಟಿ ಹೊಡೆಯುವ ವೀಡಿಯೋವೊಂದು ವೈರಲಾಗಿದೆ. ಈ ಘಟನೆಯು ಅತ್ಯಂತ ಅಮಾನವೀಯವಾಗಿದ್ದು ಒಂದು ವೇಳೆ ಮಹಿಳೆ ತಪ್ಪು ಎಸಗಿದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು. ಆದರೆ ಈ ಘಟನೆಯಲ್ಲಿ ಅಮಾನವೀಯವಾಗಿ ವರ್ತಿಸಿ ಗುಂಪುಗೂಡಿ ಮರಕ್ಕೆ ಕಟ್ಟಿ ಥಳಿಸಲಾಗಿದೆ. ಕಾನೂನನ್ನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ ಹಾಗಾಗಿ ಸರಕಾರ ಕೂಡಲೇ ಇಂತಹ ಕೃತ್ಯದ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ. ತಪ್ಪಿಸ್ಥರನ್ನು ಬಂಧಿಸಿ ಮಹಿಳೆಗೆ ನ್ಯಾಯ ಒದಗಿಸಿಕೊಡಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


Spread the love

Exit mobile version