ಮಹಿಳೆಯರ ಬಗ್ಗೆ ಕೀಳರಿಮೆ ಬೇಡ ಸಮಾನ ಗೌರವ ನೀಡಿ – ವೀಣಾ

Spread the love

ಮಹಿಳೆಯರ ಬಗ್ಗೆ ಕೀಳರಿಮೆ ಬೇಡ ಸಮಾನ ಗೌರವ ನೀಡಿ – ವೀಣಾ

ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಮಹಿಳಾ ದಿನಾಚರಣೆಯ ಪ್ರಯುಕ್ತ ಸಾಧಕ ಮಹಿಳೆ ಯರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮವನ್ನು ಬುಧವಾರ ಉಡುಪಿ ಶಾಖೆಯಲ್ಲಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಶಿಶು ಅಭಿವೃದ್ಧಿ ಜಿಲ್ಲಾ ಯೋಜನಾ ಅಧಿಕಾರಿ ಶ್ರೀಮತಿ ವೀಣಾ ಮಹಿಳಾ ದಿನಾಚರಣೆ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಮಹಿಳೆಯರಿಗೆ ಸಿಗಬೇಕಾದ ಸಮಾನ ಗೌರವ, ಪ್ರತಿದಿನವೂ ಸಿಗುವಂತಾಗಬೇಕು. ಅವರ ಬಗ್ಗೆ ಕೀಳರಿಮೆ ಮನೋಭಾವ ದೂರ ಮಾಡಬೇಕು. ಆ ರೀತಿಯ ಹೃದಯ ಶ್ರೀಮಂತಿಕೆ ಎಲ್ಲರಲ್ಲೂ ಮೂಡಿಬರ ಬೇಕಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ  ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಸಮಾಜ ಸೇವಕಿ ಸಿಂತಿಯ ಡಿಸೋಜ, ಡಾ. ಚರಿಷ್ಮ ಶೆಟ್ಟಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನ್ಯಾಯಾಧೀಶರಾದ ಮುಮ್ತಾಜ್, ಸಫಲ್ಯ ಟ್ರಸ್ಟ್ ನ ಅಧ್ಯಕ್ಷರಾದ ನಿರೂಪಮ ಪ್ರಸಾದ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಜಾನೆಟ್ ಬರ್ಬೋಜ, ಅಂತರಾಷ್ಟ್ರೀಯ ಕ್ರೀಡಾ ಹಾಗೂ ನೃತ್ಯ ಪಟು ಎಮ್.ಜೆ ಅರ್ಚನಾ, ಪವರ್ಲಿಫ್ಟರ್ ಸುಮನ ಎಮ್ ಪೂಜಾರಿ ಇವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ,ರಾಘವೇಂದ್ರ ನಾಯಕ್, ತಂಝಿಮ್ ಶಿರ್ವ, ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Spread the love

Leave a Reply

Please enter your comment!
Please enter your name here