ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಕಾರಿ – ಲಕ್ಷ್ಮೀ ಹೆಬ್ಬಾಳ್ಕರ್

Spread the love

ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ಯೋಜನೆ ಸಹಕಾರಿ – ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದ್ದು ಮೊದಲ ಯೋಜನೆಯಾಗಿ ಮಹಿಳೆಯರಿಗೆ ಮತ್ತು ವಿದ್ಯಾರ್ಥಿಗಳು ಸರಕಾರಿ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದು ಮಹಿಳೆಯರನ್ನು ಸಬಲೀಕರಣ ಮಾಡುವ ನಿಟ್ಟಿನಲ್ಲಿ ಈ ಶಕ್ತಿ ಯೋಜನೆ ಜಾರಿ ಮಾಡಲಾಗಿದ್ದು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾಗಿರುವ “ಶಕ್ತಿ” ಯೋಜನೆಗೆ ನಗರದ ಬನ್ನಂಜೆ ಸರಕಾರಿ ಸ್ ನಿಲ್ದಾಣದ ಆವರಣದಲ್ಲಿ ಭಾನುವಾರ (ಜೂ.11) ಚಾಲನೆ ನೀಡಿ ಅವರು ಮಾತನಾಡಿದರು.

ಈ ದಿನ ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಮೈಲಿಗಲ್ಲು. ಮಹಿಳೆಯರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಗೆ ಚಾಲನೆ ದೊರಕಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ. ಐತಿಹಾಸಿಕ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆಯಿಂದ ಮಹಿಳಾ ಸಮುದಾಯಕ್ಕೆ ಆರ್ಥಿಕವಾಗಿ ಲಾಭವಾಗಲಿದೆ. ಪ್ರತಿದಿನ ಕೆಲಸಕ್ಕೆ ಹೋಗುವ ಮಹಿಳೆಯರು, ಸಣ್ಣಪುಟ್ಟ ಕೆಲಸಗಳಿಗೆ ದೈನಂದಿನ ಪ್ರಯಾಣ ಮಾಡುವರಿಗೆ ಇದರಿಂದ ಪ್ರಯೋಜನ ಆಗಲಿದೆ.

ಮೊದಲ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇನ್ನುಳಿದ ಗ್ಯಾರಂಟಿ ಯೋಜನೆಗಳು ಕೂಡ ಜಾರಿಗೆ ತರಲಾಗುತ್ತಿದೆ. ನಾವು ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಪಕ್ಷ ನೀಡಿದ ಗ್ಯಾರಂಟಿಗಳನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಹಿಸಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚೀಂದ್ರ, ಜಿಲ್ಲಾ ಪಂಚಾಯತ್ ಸಿಇಒ ಪ್ರಸನ್ನ ಎಚ್, ಕುಂದಾಪುರ ಸಹಾಯಕ ಕಮೀಷನರ್ ರಶ್ಮಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love