ಮಹಿಷ ದಸರಾ ಆಚರಣೆ: ಉಡುಪಿ ಜಿಲ್ಲೆಯಲ್ಲಿ ಅ.14 ಮತ್ತು 15 ರಂದು ನಿಷೇಧಾಜ್ಞೆ ಜಾರಿ

Spread the love

ಮಹಿಷ ದಸರಾ ಆಚರಣೆ: ಉಡುಪಿ ಜಿಲ್ಲೆಯಲ್ಲಿ ಅ.14 ಮತ್ತು 15 ರಂದು ನಿಷೇಧಾಜ್ಞೆ ಜಾರಿ

ಉಡುಪಿ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಅ.14ರ ಬೆಳಗ್ಗೆ 6 ಗಂಟೆಯಿಂದ ಅ.15ರ ಸಂಜೆ 6ರವರೆಗೆ ಉಡುಪಿ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ ಮಹಿಷ ದಸರಾ ಆಚರಣೆಯ ಪರ ಅಥವಾ ವಿರೋಧದ ಪೋಸ್ಟರ್, ಬ್ಯಾನರ್, ಬಂಟಿಂಗ್ಸ್ ಅಳವಡಿಸುವು ದನ್ನು, ಮೆರವಣಿಗೆ ನಡೆಸಿ ಘೋಷಣೆ ಕೂಗುವುದನ್ನು, ಪ್ರಚೋದನಕಾರಿ ಭಾಷಣ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.


Spread the love