ಮಹೇಶ್ ಶೆಟ್ಟಿ ತಿಮರೋಡಿ ಪರ ಪ್ರತಿಭಟನೆಗೆ ಅನುಮತಿ ನಿರಾಕರಣೆ
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಅ.27ರಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ.
ಮಹೇಶ್ ಶೆಟ್ಟಿ ತಿಮರೋಡಿ ಪ್ರತಿಭಟನೆ ನಡೆಸಲು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅನುಮತಿ ಕೋರಿದ್ದು ಪ್ರಕರಣ ನ್ಯಾಯಾಲಯದಲ್ಲಿ ಇರುವ ಕಾರಣ ಅನುಮತಿ ನಿರಾಕರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.
ಈ ಸೂಚನೆಯನ್ನು ಉಲ್ಲಂಘಿಸಿದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟನೆಯ ಮೂಲಕ ಎಚ್ಚರಿಕೆ ನೀಡಿದ್ದಾರೆ.
