ಮಾಂಕಾಳ ವೈದ್ಯರಿಗೆ ಮೀನುಗಾರಿಕಾ ಸಚಿವ ಸ್ಥಾನ ನೀಡಿ – ನವೀನ್ ಸಾಲಿಯಾನ್

Spread the love

ಮಾಂಕಾಳ ವೈದ್ಯರಿಗೆ ಮೀನುಗಾರಿಕಾ ಸಚಿವ ಸ್ಥಾನ ನೀಡಿ – ನವೀನ್ ಸಾಲಿಯಾನ್

ಉಡುಪಿ: ಭಟ್ಕಳ – ಹೊನ್ನಾವರ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾಗಿರುವ ಮಾಂಕಾಳು ವೈದ್ಯ ಅವರಿಗೆ ಮೀನುಗಾರಿಗೆ ಹಾಗೂ ಬಂದರು ಇಲಾಖೆಯ ಸಚಿವ ಸ್ಥಾನ ನೀಡಬೇಕು ಎಂದು ಉಡುಪಿ ಜಿಲ್ಲಾ ಮೀನುಗಾರಿಕಾ ಕಾಂಗ್ರೆಸ್ ಉಪಾಧ್ಯಕ್ಷರಾದ ನವೀನ್ ಸಾಲಿಯಾನ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಮೀನುಗಾರರ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರು ಎರಡು ಸಲ ಶಾಸಕರಾಗಿ ಆಯ್ಕೆಯಾಗಿರಲಿಲ್ಲ. ತಮ್ಮ ಸತತ ಪ್ರಯತ್ನದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲಿ ಅವರು ಮಾಡಿದ ಜನಪರ ಕಾರ್ಯಕ್ರಮಗಳು ಇಂದಿಗೂ ಜನ ನೆನಪಿಸಿಕೊಳ್ಳುತ್ತಿದ್ದಾರೆ.

ಮೀನುಗಾರರ ಕುಟುಂಬದಲ್ಲಿ ಜನಿಸಿದ ವೈದ್ಯರಿಗೆ ಮೀನುಗಾರಿಕೆ ಕಸುಬಿನ ಬಗ್ಗೆ ಇಂಚಿಚ್ಚು ಮಾಹಿತಿ ಇದೆ. ಮೀನುಗಾರರ ಸಮಸ್ಯೆಗಳ ಮತ್ತು ಮತ್ತು ಮೀನುಗಾರರ ಬೇಡಿಕೆಗಳ ಬಗ್ಗೆ ಅರಿವಿದೆ ಎಂದು ಅವರು ತಿಳಿಸಿದ್ದಾರೆ.

ಮೀನುಗಾರರಿಗೆ ಮಾರಕವಾಗಿರುವ ಯೋಜನೆಗಳಿಂದಾಗಿ ಕರಾವಳಿ ತೀರಗಳ ಮೀನುಗಾರರ ಬದುಕು ಇಂದು ಸಂಕಷ್ಟದಲ್ಲಿದ್ದು ಅವರ ಸಂಕಷ್ಟಕ್ಕೆ ಸ್ಪಂದಿಸಲು ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಧಿಸಿದ ಮೀನುಗಾರರ ಜನಾಂಗದ ಶಾಸಕ ಮಾಂಕಾಳ ವೈದ್ಯರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.


Spread the love

Leave a Reply

Please enter your comment!
Please enter your name here