ಮಾಜಿ ಕೇಂದ್ರ ಸಚಿವರಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಮಾಜಿ ಕೇಂದ್ರ ಸಚಿವರಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಕೇಂದ್ರದ ಮಾಜಿ ಸಚಿವರು ಮತ್ತು ಅವರ ಪತ್ನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಜುಲೈ 4 ರಂದು ಕೇಂದ್ರದ ಮಾಜಿ ಸಚಿವರೊಬ್ಬರ ಪತ್ನಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಆದ್ದರಿಂದ ಮಾಜಿ ಸಚಿವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಅದರ ವರದಿ ಭಾನುವಾರ ಬಂದಿದ್ದು ಅವರಿಗೂ ಕೂಡ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಮಾಜಿ ಸಚಿವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದೆ ಇರುವುದು ಅಥವಾ ಅವರು ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಇರುವುದು ಈಗ ಆತಂಕಕ್ಕೆ ಕಾರಣವಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಜಿ ಸಚಿವರ ಸಂಪರ್ಕ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.


Spread the love