ಮಾಜಿ ಪ್ರಧಾನಿ ವಾಜಪೇಯಿ ನಿಧನ: ಸಚಿವ ಖಾದರ್ ಸಂತಾಪ

Spread the love

ಮಾಜಿ ಪ್ರಧಾನಿ ವಾಜಪೇಯಿ ನಿಧನ: ಸಚಿವ ಖಾದರ್ ಸಂತಾಪ

ಮಂಗಳೂರು: ಅಜಾತಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಿಧನಕ್ಕೆ ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಅತೀವ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಪ್ರತಿಮ ಸಂಸದೀಯ ಪಟುವಾಗಿದ್ದ ವಾಜಪೇಯಿಯವರು ದೇಶದ ಒಳಿತಿಗಾಗಿ ಹಲವಾರು ದಿಟ್ಟ ನಿರ್ಧಾರಗಳನ್ನು ಕೈಗೊಂಡಿದ್ದರು. ಸ್ವಾತಂತ್ರ್ಯೋತ್ತರ ಭಾರತದ ಹಲವು ಪ್ರಮುಖ ಯೋಜನೆಗಳ ಹಿಂದೆ ವಾಜಪೇಯಿಯವರ ಒತ್ತಾಸೆ ಇದೆ. ಸರ್ವರನ್ನೂ ಗೌರವಿಸುವ ವಾಜಪೇಯಿಯವರ ಗುಣ,ಇಂದಿನ ರಾಜಕಾರಣಿಗಳಿಗೆ ಮಾದರಿ. ಅವರ ಅಗಲುವಿಕೆ ದೇಶಕ್ಕೆ ತುಂಬಲಾರದ ನಷ್ಟ ಎಂದು ಸಚಿವ ಖಾದರ್ ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.


Spread the love