ಮಾಜಿ ಭೂಗತ ಪಾತಕಿ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನ

Spread the love

ಮಾಜಿ ಭೂಗತ ಪಾತಕಿ, ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ನಿಧನ

ಬೆಂಗಳೂರು: ಮಾಜಿ ಭೂಗತ ದೊರೆ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ (68) ಶುಕ್ರವಾರ ಮುಂಜಾನೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು

ಒಂದು ವರ್ಷದ ಹಿಂದೆ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಅವರು ಕೆಲವು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅಲ್ಲಿಯೇ ಕೊನೆಯುಸಿರು ಎಳೆದರು.

ಮುತ್ತಪ್ಪ ರೈ ಅವರು ಒಂದು ಕಾಲದಲ್ಲಿ ಭೂಗತ ಲೋಕವನ್ನು ಆಳಿದರಾದರೂ ಹಲವು ವರ್ಷಗಳಿಂದ ಭೂಗತ ಲೋಕ ತ್ಯಜಿಸಿ ಸಮಾಜ ಸೇವೆಗೆ ಅರ್ಪಿಸಿಕೊಂಡಿದ್ದರು. ಜಯ ಕರ್ನಾಟಕ ಸಂಘಟನೆ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. 2018ರಲ್ಲಿ ಇವರಿಗೆ ಕ್ಯಾನ್ಸರ್ ಇರುವುದು ದೃಢಪಟ್ಟಿತ್ತು.

ಇವರು ಇಬ್ಬರು ಪುತ್ರರು, ಮೂವರು ಸಹೋದರರು ಹಾಗೂ ಒರ್ವ ಸಹೋದರಿಯನ್ನು ಹೊಂದಿದ್ದು, ರಾಮನಗರ ತಾಲೂಕಿನ ಬಿಡದಿಯಲಲ್ಲಿ ಇರುವ ಅವರ ಸ್ವಗ್ರಹದಲ್ಲಿ ಕೆಲವೇ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಕ್ರಿಯೆ ನಡೆಯಲಿದೆ


Spread the love