ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಭೇಟಿ

Spread the love

ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಮನೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಭೇಟಿ

ಉಡುಪಿ: ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಗಾಳಿ ಸುದ್ದಿಗಳ ಬೆನ್ನಲ್ಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಮತ್ತು ದಕ ಮತ್ತು ಉಡುಪಿ ಜಿಲ್ಲಾ ವಿಧಾನಪರಿಷತ್‌ ಚುನಾವಣಾ ಅಭ್ಯರ್ಥಿಯಾಗಿರುವ ಮಂಜುನಾಥ ಭಂಡಾರಿಯವರು ಮಧ್ವರಾಜ್‌ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ಪೇಜಾವರ ಸ್ವಾಮೀಜಿಗೆ ಪದ್ಮವಿಭೂಷಣ ಪ್ರಶಸ್ತಿ ಕಾರ್ಯಕ್ರಮದ ವಿಚಾರದಲ್ಲಿ ಮೋದಿಯವರನ್ನು ಹೊಗಳಿದ್ದಲ್ಲದೆ, ಕೇಂದ್ರ ಸರಕಾರ ಕೃಷಿ ಕಾನೂನುಗಳನ್ನು ವಾಪಾಸು ಪಡೆದಿದರುವ ವಿಚಾರದಲ್ಲಿ ಕೂಡ ಟ್ವೀಟ್‌ ಮಾಡುವ ಮೂಲಕ ಮೋದಿಯವರನ್ನು ಅಭಿನಂದಿಸಿದ್ದರು. ಬಳಿಕ ಟ್ವೀಟ್‌ ಮೂಲಕವೇ ತಮ್ಮ ಸ್ಪಷ್ಟನೆ ಕೂಡ ನೀಡಿದ್ದರು. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಪ್ರಮೋದ್‌ ಮಧ್ವರಾಜ್‌ ಬಿಜೆಪಿಗೆ ಸೇರಲಿದ್ದಾರೆ ಎಂಬ ಗಾಳಿ ಸುದ್ದಿಗಳು ವ್ಯಾಪಕವಾಗಿ ಹರಡಿತ್ತು.

ಈ ಕುರಿತು ಗುರುವಾರ ಉಡುಪಿಗೆ ಆಗಮಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಅವರಿಗೆ ಮಾಧ್ಯಮದವರು ಪ್ರಶ್ನಿಸಿದಾಗ ಬೆಂಗಳೂರಿನಲ್ಲಿ ನಡೆದ ಸದಸ್ಯತ್ವ ನೋಂದಣಿ ಸಭೆಯಲ್ಲಿ ಪ್ರಮೋದ್ ಭಾಗವಹಿಸಿದ್ದರು ಅಲ್ಲದೆ ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಚಾರದ ನೇತೃತ್ವ ವಹಿಸಿ ಉಪಚುನಾವಣೆ ಕಾರ್ಯದಲ್ಲಿ 15 ದಿನ ಭಾಗವಹಿಸಿದ್ದರು. ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಆದರೆ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ನನಗೆ ಗೊತ್ತಿಲ್ಲ ಪ್ರಮೋದ್ ಜೊತೆ ಸಮಾಲೋಚನೆ ಮಾಡುತ್ತೇನೆ ಎಂದಿದ್ದರು.


Spread the love

Leave a Reply