Spread the love
ಮಾನಸಿಕ ಅಸ್ವಸ್ಥ ಕಿರಣ್ ಕ್ರಾಸ್ತಾ ಕಾಣೆ: ಪತ್ತೆಗೆ ಮನವಿ
ಮಂಗಳೂರು: ಕಿರಣ್ ಕ್ರಾಸ್ತಾ (37) ಎಂಬವರು ಮಾನಸಿಕ ಅಸ್ವಸ್ಥನಾಗಿದ್ದು, ಕಳೆದ ವರ್ಷ ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೆ ಕಾಣೆಯಾಗಿರುವ ಬಗ್ಗೆ ಸುಳ್ಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ: ಎತ್ತರ 5.8 ಅಡಿ, ಸಾಧಾರಣ ಶರೀರ, ದುಂಡು ಮುಖ, ಗೋಧಿ ಮೈಬಣ್ಣ ಹೊಂದಿರುತ್ತಾರೆ. ಕನ್ನಡ, ತುಳು, ಕೊಂಕಣಿ, ತುಳು, ಹಿಂದಿ, ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಕೆಂಪು ಟಿ-ಶರ್ಟ್ ಮತ್ತು ಕಪ್ಪು ಜೀನ್ಸ್ ಪ್ಯಾಂಟ್ ಧರಿಸಿದ್ದರು.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುಳ್ಯ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love













