ಮಾರ್ಚ್ 10: ಉಡುಪಿಯಲ್ಲಿ ಪರಿವರ್ತನಾ ಯಾತ್ರೆ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ

ಮಾರ್ಚ್ 10: ಉಡುಪಿಯಲ್ಲಿ ಪರಿವರ್ತನಾ ಯಾತ್ರೆ ಮತ್ತು ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶ

ಉಡುಪಿ: ಕಾಂಗ್ರೆಸ್ ಪಕ್ಷದ ಜನಪರವಾದ ಕಾರ್ಯಕ್ರಮಗಳನ್ನು ತಿಳಿಸಲು ಮತ್ತು ಮುಂಬರುವ ಲೋಕಸಭಾ ಚುನಾವಣೆಯ ಸಿದ್ದತೆ ಮತ್ತು ಪ್ರಚಾರ, ಜನಸ್ಪಂದನದ ರೂಪುರೇಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕಾಂಗ್ರೆಸ್ ನ ಪರಿವರ್ತನಾ ಯಾತ್ರೆ ಮತ್ತು ಉಡುಪಿ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಮಾರ್ಚ್ 10ರಂದು ಭಾನುವಾರ ಉಡುಪಿಯ ಕಲ್ಷಂಕ ರಾಯಲ್ ಗಾರ್ಡನ್ ನಲ್ಲಿ ಮಧ್ಯಾಹ್ನ 2.30 ಕ್ಕೆ ಏರ್ಪಡಿಸಲಾಗಿದೆ.

ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವೆ ಡಾ|ಜಯಮಾಲಾ ಅವರು ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳು ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಎಐಸಿಸಿ ಕಾರ್ಯದರ್ಶಿ ವಿಷ್ಣುನಾದನ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳಾದ ಆಸ್ಕರ್ ಫೆರ್ನಾಂಡಿಸ್, ವೀರಪ್ಪ ಮೊಯ್ಲಿ, ಬಿಕೆ ಹರಿಪ್ರಸಾದ್, ಸಚಿವರಾದ ಯು ಟಿ ಖಾದರ್, ಮಾಜಿ ಸಚಿವರಾದ ರಮಾನಾಥರ ರೈ, ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಶಾಸಕರಾದ ಗೋಪಾಲ ಭಂಡಾರಿ, ಗೋಪಾಲ ಪೂಜಾರಿ, ಉಡುಪಿ ಉಸ್ತುವಾರಿಯಾಗಿರುವ ಜಿ ಎ ಬಾವಾ, ಮುಖಂಡರಾದ ರಾಕೇಶ್ ಮಲ್ಲಿ, ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಶೋಕ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ನ ಎಲ್ಲಾ ಪದಾಧಿಕಾರಿಗಳು, ಎಲ್ಲಾ ಜನಪ್ರತಿನಿಧಿಗಳು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ.

ಪರಿವರ್ತನಾ ಯಾತ್ರೆಯಲ್ಲಿ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಅತ್ಯಂತ ಯಶಸ್ವಿಗೊಳಿಸುವಂತೆ ಸಚಿವೆ ಡಾ ಜಯಮಾಲಾ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. ಈ ಬೃಹತ್ ಸಮಾವೇಶದಲ್ಲಿ ಎಲ್ಲಾ ಕಾರ್ಯಕರ್ತರು, ಪಕ್ಷದ ಮುಖಂಡರು, ಜನಪ್ರತಿನಿಧಿಗಳು, ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ನಗರಸಭೆ ಮುಂತಾದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷದ ಎಲ್ಲಾ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಸಚಿವೆ ಜಯಮಾಲಾ ವಿನಂತಿಸಿದ್ದಾರೆ.