ಮಾರ್ಚ್ 3 ರಂದು ಉಡುಪಿ ಜಿಲ್ಲೆಗೆ ರಣ್ ದೀಪ್ ಸಿಂಗ್ ಸುರ್ಜೇವಾಲ ಭೇಟಿ

Spread the love

ಮಾರ್ಚ್ 3 ರಂದು ಉಡುಪಿ ಜಿಲ್ಲೆಗೆ ರಣ್ ದೀಪ್ ಸಿಂಗ್ ಸುರ್ಜೇವಾಲ ಭೇಟಿ

ಉಡುಪಿ: ಅಖಿಲಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳೂ ಆದ ಸನ್ಮಾನ್ಯ ರಣ್ ದೀಪ್ ಸಿಂಗ್ ಸುರ್ಜೇವಾಲ ರವರು ಮಾ. 3 ರಂದು ಶುಕ್ರವಾರ ಬೆಳಿಗ್ಯೆ ಗಂಟೆ 9.30 ಕ್ಕೆ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಲಿರುವರು

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಚುನಾವಣಾ ಭರವಸೆಗಳಾದ “ಗೃಹಲಕ್ಷ್ಮಿ” “ಗೃಹಜ್ಯೋತಿ” ಯೋಜನೆಗಳ ಗ್ಯಾರಿಂಟಿ ಕಾರ್ಡ್ ಗಳನ್ನು ಬಿಡುಗಡೆ ಗೊಳಿಸುವರುˌ

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಸನ್ಮಾನ್ಯ ಬಿ.ಕೆ. ಹರಿಪ್ರಸಾದ್ ˌ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಷಕ್ಷ ಎಂ.ಬಿ. ಪಾಟೀಲ್ ˌ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮೈಸೂರು ವಿಭಾಗದ ಉಸ್ತುವಾರಿಗಳಾದ ಆರ್. ಧ್ರುವನಾರಾಯಣ ಮತ್ತು ಎಐಸಿಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿಗಳಾದ ರೋಝೀ ಜೋನ್ ˌ ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿ ˌ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ವಿಧಾನಸಭಾ ಕ್ಷೆತ್ರಗಳ ಉಸ್ತುವಾರಿಗಳಾದ ಅಭಯಚಂದ್ರ ಜೈನ್ˌ ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಎ. ಗಪೂರ್, ಉಡುಪಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಮಿಥುನ್ ರೈ ˌ ಕಾರ್ಕಳ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾದ ಮಮತಾ ಗಟ್ಟಿ , ಪಕ್ಷದ ಮುಖಂಡರಾದ ಮಲ್ಯಾಡಿ ಶಿವರಾಮ ಶೆಟ್ಟಿˌ ಉಪಸ್ಥಿತರಿರುವರುˌ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.ˌ


Spread the love