ಮಾರ್ಚ್‌ 9ರಂದು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ

Spread the love

ಮಾರ್ಚ್‌ 9ರಂದು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ
 

ತುಮಕೂರು: ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಖಂಡಿಸಿ ಮಾರ್ಚ್‌ 9ರಂದು ರಾಜ್ಯ ಬಂದ್‌ಗೆ ಕಾಂಗ್ರೆಸ್ ಕರೆ ನೀಡಿದೆ.

ಮಾರ್ಚ್ 9ರಂದು ಬೆಳಿಗ್ಗೆ 9ರಿಂದ 11 ಗಂಟೆ ವರೆಗೆ ಬಂದ್‌ ಮಾಡಲಾಗುವುದು. ಶಾಲೆ, ಕಾಲೇಜು, ಆಸ್ಪತ್ರೆಗಳಿಗೆ ತೊಂದರೆಯಾಗದಂತೆ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕೊರಟಗೆರೆ ಪಟ್ಟಣದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ‘ವ್ಯಾಪಾರಿಗಳು ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು‌. ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣಕ್ಕೆ ಎಲ್ಲರ ಸಹಕಾರ ಅಗತ್ಯ. ಮುಂದಿನ ದಿನಗಳಲ್ಲಿ ಉತ್ತಮ ಆಡಳಿತ ನೀಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಜನ ಕಾಂಗ್ರೆಸ್‌ಗೆ ಆಶೀರ್ವಾದ ಮಾಡುತ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭ್ರಷ್ಟಾಚಾರದಿಂದಾಗಿ ರಾಜ್ಯಕ್ಕೆ ಕಳಂಕ ಬಂದಿದೆ. ಈಗಾಗಲೇ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ ಮಾಡಿದ್ದೇವೆ. ಕಳೆದ ಮೂರುವರೆ ವರ್ಷದಿಂದ ಬಿಜೆಪಿಯ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಜನರ ಗಮನ ಸೆಳೆಯುವ ಕೆಲಸವಾಗಿದೆ. ಈ ಸರ್ಕಾರ ರಾಜ್ಯಕ್ಕೆ ಅಗೌರ ತೋರಿದೆ ಎಂದರು.


Spread the love

Leave a Reply

Please enter your comment!
Please enter your name here