ಮಾ.12 : ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ

Spread the love

ಮಾ.12 : ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ

ಉಡುಪಿ: ವಿಧಾನಸಭಾ ಚುನಾವಣೆಯ ಪೂರ್ವಸಿದ್ಧತೆಗಳ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶವು ಮಾ.12 ರವಿವಾರ ಮಧ್ಯಾಹ್ನ 3.00 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಬೃಹತ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಳವಿಕಾ ಅವಿನಾಶ್ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.

ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠಗಳ ಸಹಿತ ಜಿಲ್ಲೆಯ ಎಲ್ಲ ಆರು ಮಂಡಲಗಳ ವ್ಯಾಪ್ತಿಯ ಮಹಿಳಾ ಮೋರ್ಚಾ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಜಿಲ್ಲಾ ಮಹಿಳಾ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.


Spread the love

Leave a Reply

Please enter your comment!
Please enter your name here