ಮಾ. 24 : ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

Spread the love

ಮಾ. 24 : ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಬಜೆ ರೇಚಕ ಸ್ಥಾವರದಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಕಾರಣ ಮಾರ್ಚ್ 24ರಂದು ಶುಕ್ರವಾರ ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡ್ ಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

ಕಾರ್ಯನಿರ್ವಾಹಕ ಇಂಜಿನಿಯರ್, ಕಾರ್ಯ ಮತ್ತು ಪಾಲನೆ ವಿಭಾಗ, ಮೆಸ್ಕಾಂ ಉಡುಪಿ ವತಿಯಿಂದ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಿಗೆ ನೀರು ಒದಗಿಸುವ ಬಜೆ ರೇಚಕ ಸ್ಥಾವರದಲ್ಲಿ ವಿದ್ಯುತ್ ವ್ಯತ್ಯಯವಾಗಲಿರುತ್ತದೆ. ಆದುದರಿಂದ ಮಾರ್ಚ್ 24 ರಂದು ಉಡುಪಿ ನಗರಸಭಾ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love