
Spread the love
ಮಾ. 4-6: ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ
ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಮಾರ್ಚ್ 4 ರಿಂದ 6 ರ ವರೆಗೆ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ ಅಜ್ಜರಕಾಡು ಇಲ್ಲಿ ಜರುಗಲಿದೆ.
ಮಾರ್ಚ್ 4 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಕ್ರೀಡಾಪಟು, ಇಂಡಿಯನ್ ಬುಕ್ಸ್ ಆಫ್ ರೆಕಾರ್ಡ್ ದಾಖಲೆ ಹಾಗೂ ಕಲಾಶ್ರೀ ಪ್ರಶಸ್ತಿ ಪುರಸ್ಕೃತ ಅಭಿನ್ ದೇವಾಡಿಗ ಭಾಗವಹಿಸಲಿದ್ದಾರೆ.
ಮಾರ್ಚ್ 6 ರಂದು ಸಂಜೆ 4 ಗಂಟೆಗೆ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Spread the love