ಮಿಥುನ್ ರೈ ಗೆ ಕೊಲೆ ಬೆದರಿಕೆ; ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಮಿಥುನ್ ರೈ ಗೆ ಕೊಲೆ ಬೆದರಿಕೆ; ಮೂವರನ್ನು ಬಂಧಿಸಿದ ಪೊಲೀಸರು

ಮಂಗಳೂರು: ದ.ಕ. ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಿದ ಆರೋಪದ ಮೇಲೆ ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಬಂಟ್ವಾಳ ನಿವಾಸಿ ಸಚಿನ್ (25), ಕಾಸರಗೋಡು ನಿವಾಸಿ ಕಾರ್ತಿಕ್ (30) ಮತ್ತು ಬಂಟ್ವಾಳ ನಿವಾಸಿ ನಿಶಾಂತ್ (23) ಎಂದು ಗುರುತಿಸಲಾಗಿದೆ.

ಮೇ 23ರಂದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ಬಹುಮತದೊಂದಿಗೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಡಕಬೈಲ್ಸಮಿತಿಯ ಬಿಜೆಪಿ ಕಾರ್ಯಕರ್ತರು ಬಡಕಬೈಲ್ ಜಂಕ್ಷನ್ ನಲ್ಲಿ ವೀಜಯೋತ್ಸವ ಆಚರಿಸಿದ್ದರು ಎನ್ನಲಾಗಿದೆ. ಈ ವೇಳೆ ಮಿಥುನ್ರೈಗೆ ಅವಾಚ್ಯ ಶಬ್ಬಗಳಿಂದ ನಿಂದಿಸಿದಲ್ಲದೆ, ಕೊಲೆ ಬೆದರಿಕೆಯನ್ನು ಒಡ್ಡಲಾದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

“ಮಿಥುನ್ ರೈ ಬಜರಂಗ ದಳದ ತಂಟೆಗೆ ಬಂದರೆ ಕೈ, ಕಾಲನ್ನು ತೆಗೆಯುತ್ತೇವೆ. ಅಗತ್ಯವಿದ್ದರೆ ತಲೆಯನ್ನು ತೆಗೆಯುತ್ತೇವೆ” ಎಂಬಕೊಲೆ ಎಚ್ಚರಿಕೆಯ ಸಂದೇಶವೊಂದನ್ನು ಕಾರ್ಯಕರ್ತನೋರ್ವ ಕೈಯಲ್ಲಿ ಕೇಸರಿ ಬಾವುಟ ಹಿಡಿದು, ತಲೆಗೆ ಕೇಸರಿಪಟ್ಟಿ ಕಟ್ಟಿಬೊಬ್ಬೆಹಾಕುತ್ತಿದ್ದು, ಇದನ್ನು ಉಳಿದ ಕಾರ್ಯಕರ್ತರೂ ಕೂಡಾ ಹೇಳುತ್ತಿರುವುದು ವೀಡಿಯೋದಲ್ಲಿ ದಾಖಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದರು. ಅದರಂತೆ ಮೂವರನ್ನು ವಶಕ್ಕೆ ಪಡೆದಿದ್ದು ತನಿಖೆ ಪ್ರಗತಿಯಲ್ಲಿದೆ.

1 Comment

Comments are closed.