ಮೀನುಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಯಶ್ ಪಾಲ್ ಸುವರ್ಣ ಮನವಿ

Spread the love

ಮೀನುಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಯಶ್ ಪಾಲ್ ಸುವರ್ಣ ಮನವಿ

ಉಡುಪಿ: ಆರ್ಥಿಕ ಸಂಕಷ್ಟದ ನಡುವೆಯೂ ಜನಸಾಮಾನ್ಯರಿಗಾಗಿ ರೂ.1250 ಕೋಟಿ ವಿಶೇಷ ಪ್ಯಾಕೇಜ್ ನೀಡುವ ಮೂಲಕ ಮುಖ್ಯಮಂತ್ರಿಗಳ ಜನಪರ ನಿರ್ಧಾರ ಸ್ವಾಗತಾರ್ಹ. ಕರಾವಳಿ ಕರ್ನಾಟಕದ ಆರ್ಥಿಕತೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಮೀನುಗಾರಿಕೆ ಕ್ಷೇತ್ರ ಕೂಡಾ ಕೊರೊನಾ ಪರಿಣಾಮದಿಂದ ಸಂಕಷ್ಟಕ್ಕೀಡಾಗಿದ್ದು ಈ ನಿಟ್ಟಿನಲ್ಲಿ ಮೀನುಗಾರಿಕೆಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಮಸ್ತ ಮೀನುಗಾರರ ಪರವಾಗಿ ಮನವಿ ಮಾಡುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ವಿಶೇಷ ಪ್ಯಾಕೇಜ್ ಮೂಲಕ ಮೀನುಗಾರಿಕೆಯಲ್ಲಿ ತೊಡಗಿರುವ ಕಾರ್ಮಿಕರು ಹಾಗೂ ಮಹಿಳಾ ಮೀನುಗಾರರರಿಗೆ ಸಹಾಯಧನ, ಡೀಸೆಲ್ ಸಬ್ಸಿಡಿ ಶೀಘ್ರ ಬಿಡುಗಡೆ, ಮೀನುಗಾರಿಕೆ ಸಂಬಂಧಿಸಿದ ಸಾಲ ಮರುಪಾವತಿ ಕಾಲಾವಕಾಶ ವಿಸ್ತರಣೆ ಮಾಡಿ ಸಂಕಷ್ಟದ ಈ ಸಂದರ್ಭದಲ್ಲಿ ಮೀನುಗಾರರಿಗೆ ಆರ್ಥಿಕ ಚೈತನ್ಯ ತುಂಬುವಲ್ಲಿ ರಾಜ್ಯ ಸರಕಾರ ಸಹಕರಿಸುವಂತೆ ಮನವಿ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love