ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‍ಪಾಲ್ ಸುವರ್ಣ

Spread the love

ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್‍ಪಾಲ್ ಸುವರ್ಣ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ ವತಿಯಿಂದ ಪತ್ರಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಯಶ್‍ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಫೆಡರೇಶನ್ ಸದಸ್ಯರ ಮಕ್ಕಳು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.80, 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.60 ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಇತರ ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ.85, 2020-21 ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 75, ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿರಬೇಕು.

ದಿನಾಂಕ: 30.07.2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‍ನ ಶಾಖಾ ಕಚೇರಿಗಳಲ್ಲಿ ಅರ್ಜಿ ಲಭ್ಯವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love