ಮುಂದಿನ ಚುನಾವಣೆಗೆ ಕಾರ್ಯಪ್ರವೃತ್ತರಾಗಲು ಹರೀಶ್ ಕುಮಾರ್ ಕರೆ

Spread the love

ಮುಂದಿನ ಚುನಾವಣೆಗೆ ಕಾರ್ಯಪ್ರವೃತ್ತರಾಗಲು ಹರೀಶ್ ಕುಮಾರ್ ಕರೆ

ಬಿಜೆಪಿ ಸರ್ಕಾರದ ವೈಫಲ್ಯಗಳು ಹಾಗೂ ಭ್ರಷ್ಟಚಾರಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಜನರು ಭ್ರಮನಿರಸಗೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದರ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಆ ನಿಟ್ಟಿನಲ್ಲಿ ಕಾರ್ಯಕರ್ತರೆಲ್ಲರೂ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕರೆ ನೀಡಿದ್ದಾರೆ.

ಅವರು ಸೋಮವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರಗಿದ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸಭೆ ಆರಂಭಕ್ಕೂ ಮುನ್ನ ಇತ್ತೀಚಿಗೆ ನಿಧನರಾದ ನಾಯಕರಾದ ಮುಸ್ತಾಖ್ ಅಹ್ಮದ್, ಇದ್ದಿಕುಞಿ, ಕಮಲಾಕ್ಷ ರೈ, ಮೇಘನಾದಾಸ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭ ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ರಾಜ್ಯ ಸಭಾ ಸದಸ್ಯ ಬಿ.ಇಬ್ರಾಹೀಂ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಮಮತ ಗಟ್ಟಿ, ಧನಂಜಯ ಅಡ್ಪಂಗಯ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರುಗಳು, ಮುಂಚೂಣಿ ಘಟಕಾಧ್ಯಕ್ಷರುಗಳು, ಕೆಪಿಸಿಸಿ ಸಂಯೋಜಕರುಗಳು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಭೆಯ ಯಶಸ್ವಿಗೆ ಯು.ಎಚ್.ಖಾಲಿದ್ ಉಜಿರೆ, ನೀರಜ್ ಪಾಲ್, ಸಲೀಂ ಪಾಂಡೇಶ್ವರ, ಸಿ.ಎಂ.ಮುಸ್ತಫಾ, ಶುಭೋದಯ ಆಳ್ವ ಸಹಕರಿಸಿದರು.


Spread the love