ಮುಂದುವರೆದ ಮಳೆ: ನಾಳೆ (ಜು.27)ರಂದು ಉಡುಪಿ ಜಿಲ್ಲೆಯ ಶಾಲೆ ಪಿಯುಕಾಲೇಜುಗಳಿಗೆ ರಜೆ ಘೋಷಣೆ

Spread the love

ಮುಂದುವರೆದ ಮಳೆ: ನಾಳೆ (ಜು.27)ರಂದು ಉಡುಪಿ ಜಿಲ್ಲೆಯ ಶಾಲೆ ಪಿಯುಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ ಮುಂದುವರಿದ ಕಾರಣ ಜಿಲ್ಲೆಯಲ್ಲಿ ಜುಲೈ 27ರಂದು (ಗುರುವಾರ) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಹೆಚ್ಚು ಮಳೆಯಾಗುತ್ತಿರುವುದರಿಂದ ಜುಲೈ 27 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಘೋಷಣೆ ಮಾಡಿಲ್ಲ.


Spread the love

2 Comments

Comments are closed.