ಮುಂದುವರೆದ ಮಳೆ; ಮಂಗಳವಾರವೂ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

Spread the love

ಮುಂದುವರೆದ ಮಳೆ; ಮಂಗಳವಾರವೂ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಭೀಕರ ಗಾಳಿ ಮಳೆಯಾಗಿದ್ದು ಮುಂಜಾಗೃತ ಕ್ರಮವಾಗಿ ಅಗಸ್ಟ್ 14ರಂದು ಮತ್ತೆ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು ಸೋಮವಾರವೂ ಕೂಡ ಭಾರಿ ಗಾಳಿ ಮಳೆಯಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಈ ಮಾಹಿತಿಯನ್ನು ಶಾಲೆಗಳ ಮುಖ್ಯಸ್ಥರು ವಿದ್ಯಾರ್ಥಿಗಳಿಗೆ ನೀಡಲು ಮತ್ತು ಯಾವುದೇ ಅನಾಹುತವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love