
Spread the love
ಮುಕ್ಕ ಬಳಿ ಮೀನು ಸಾಗಾಟದ ಲಾರಿ ಪಲ್ಟಿ; ಸಂಚಾರ ಅಸ್ತವ್ಯಸ್ತ
ಮಂಗಳೂರು: ರಾ.ಹೆ.66ರ ಸುರತ್ಕಲ್ ಸಮೀಪದ ಮುಕ್ಕದಲ್ಲಿ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾಗಿ ಲಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ರವಿವಾರ ರಾತ್ರಿ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ಮುಕ್ಕ ಬಳಿ ಹೆದ್ದಾರಿಯಲ್ಲೇ ಪಲ್ಟಿ ಹೊಡೆಯಿತು. ಇದರಿಂದ ಲಾರಿಯಲ್ಲಿದ್ದ ಮೀನಿನ ಬಾಕ್ಸ್ ರಸ್ತೆಗೆ ಎಸೆಯಲ್ಪಟ್ಟಿದ್ದು, ಮೀನು ರಸ್ತೆಯಲ್ಲಿ ಚೆಲ್ಲಿದೆ. ಮೀನಿನ ಎಣ್ಣೆ ತೆಗೆಯುವ ಕಾರ್ಖಾನೆಗೆ ಕೊಳೆತ ಮೀನುಗಳನ್ನು ಈ ಲಾರಿಯಲ್ಲಿ ಸಾಗಿಸುತ್ತಿತ್ತು ಎನ್ನಲಾಗಿದೆ. ಲಾರಿ ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಸಂಚಾರ ಉತ್ತರ ಠಾಣೆಯ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
Spread the love