ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿಗೂ ಕೊರೊನಾ ಪಾಸಿಟಿವ್‌

Spread the love

ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿಗೂ ಕೊರೊನಾ ಪಾಸಿಟಿವ್‌

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೋಮವಾರ ಕೊರೋನಾ ಸೋಂಕು ದೃಢವಾಗಿದೆ.

ಈ ಬಗ್ಗೆ ಸ್ವತಃ ಟ್ವೀಟ್‌ ಮಾಡಿ ಖಚಿತ ಪಡಿಸಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಹೇಳೀದ್ದಾರೆ.

ರಾಜ್ಯಾದ್ಯಂತ 24 ಗಂಟೆಗಳಲ್ಲಿ 11,698 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೋವಿಡ್-19 ಸೋಂಕಿನಿಂದ ಸಾವನ್ನಪ್ಪಿದ್ದಾರೆ (ಬೆಂಗಳೂರು-2) ಬೆಂಗಳೂರು ಒಂದರಲ್ಲೇ 9,221 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್-19 ಪಾಸಿಟಿವಿಟಿ ದರ 7.77%ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 1,148 ಕೋವಿಡ್-19 ನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳು ರಾಜ್ಯದಲ್ಲಿ 60,148 ಏರಿಕೆಯಾಗಿದ್ದು, ಬೆಂಗಳೂರು ಒಂದರಲ್ಲೇ 49 ಸಾವಿರ ದಾಟಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.


Spread the love