ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ

Spread the love

ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ – ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ
 

ಮಂಗಳೂರು: ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.

ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳುವ ಸಲುವಾಗಿ ಕ್ರಮ ತೆಗೆದುಕೊಳ್ಳುವುದಾಗಿ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಪ್ರವೇಶಕ್ಕೆ ಜು. 28ರಿಂದ ಮುಂದಿನ ಆದೇಶದವರೆಗೆ ನಿಷೇಧ ಜಾರಿಯಲ್ಲಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಯು ಕೋಮು ದ್ವೇಷದಿಂದ ಮುಸ್ಲಿಂ ಸಮುದಾಯದವರು ಎಸಗಿರುವುದಾಗಿ ಗಾಳಿ ಸುದ್ದಿ ಹಬ್ಬಿರುತ್ತದೆ. ಅಲ್ಲದೆ ಪ್ರವೀಣ್‌ರವರ ಶವ ಮೆರವಣಿಗೆಯ ಸಂದರ್ಭ ಅಲ್ಲಲ್ಲಿ ಘರ್ಷಣೆ ಉಂಟಾಗಿ ಸಾರ್ವಜನಿಕ ಆಸ್ತಿಪಾಸ್ತಿ, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುತ್ತದೆ. ಈ ಪರಿಸ್ಥಿತಿಯಲ್ಲಿ ಪ್ರಮೋದ್ ಮುತಾಲಿಕ್‌ರವರು ಬೆಳ್ಳಾರೆ ಮತ್ತು ಮೃತ ಪ್ರವೀಣ್‌ರವರ ಮನೆ ಹಾಗೂ ಇತರ ಕಡೆಗಳಿಗೆ ಭೇಟಿಯಾಗುವ ಮಾಹಿತಿ ದೊರಕಿದೆ. ಮುತಾಲಿಕ್ ಅವರು ಈ ಹಿಂದೆ ಭೇಟಿ ಮಾಡಿದ ಸ್ಥಳಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಹಿಂದೂ ಸಮುದಾಯದ ಜನರ ಕೋಮು ಭಾವನೆ ಕೆರಳಿಸುತ್ತಾ ಬಂದಿದ್ದಾರೆ ಹಾಗೂ ಕೋಮು ಸೌಹಾರ್ದತೆ ಹದಗೆಡಿಸಿದ ಪ್ರಕರಣಗಳು ವರದಿಯಾಗಿವೆ.

ಇದೀಗ ಅವರು ದ.ಕ. ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಪ್ರವೇಶಿಸಿದ್ದಲ್ಲಿ ಪ್ರಚೋದನಕಾರಿ ಹೇಳಿಕೆಯನ್ನು ನೀಡಿ ಮತ್ತಷ್ಟು ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿ ಎರಡು ಕೋಮುಗಳ ನಡುವೆ ಸಂಷರ್ಷ ಉಂಟಾಗಿ ಕೋಮು ಸಾಹೌರ್ದತೆ ಹದಗೆಟ್ಟು ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಅವರಿಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 144ರ ಅನ್ವಯ ಆದೇಶ ಹೊರಡಿಸುವಂತೆ ಪೊಲೀಸ್ ಅಧೀಕ್ಷಕರು ಮಾಡಿರುವ ಮನವಿ ಮೇರೆಗೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.


Spread the love

Leave a Reply

Please enter your comment!
Please enter your name here