ಮುರುಘಾಶ್ರೀಗಳ ಪ್ರಕರಣದಲ್ಲಿ ಪೊಲೀಸರಿಂದ ಸ್ವತಂತ್ರ ತನಿಖೆ

Spread the love

ಮುರುಘಾಶ್ರೀಗಳ ಪ್ರಕರಣದಲ್ಲಿ ಪೊಲೀಸರಿಂದ ಸ್ವತಂತ್ರ ತನಿಖೆ

ಮೈಸೂರು: ಮುರುಘಾಶ್ರೀಗಳ ಪ್ರಕರಣದ ವಿಚಾರದಲ್ಲಿ ಪೊಲೀಸರಿಗೆ ಸ್ವತಂತ್ರವಾಗಿ ತನಿಖೆ ಮಾಡಲು ಬಿಟ್ಟಿರುವುದಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುರುಘಾ ಶರಣರ ಪ್ರಕರಣದಲ್ಲಿ ಸರ್ಕಾರ ಯಾವುದೇ ರೀತಿಯಲ್ಲಿಯೂ ಮಧ್ಯಪ್ರವೇಶ ಮಾಡಿಲ್ಲ. ಪೊಲೀಸರು ಸ್ವತಂತ್ರರಾಗಿ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಯಾವುದೇ ರಾಜಕೀಯ ಒತ್ತಡ ಹೇರಿಲ್ಲ. ಯಾವುದೇ ಒಂದು ಪ್ರಕರಣದಲ್ಲಿ ಒತ್ತಡ ಹಾಕುವುದು, ಅದರ ಮೇಲೆ ರಾಜಕೀಯ ಪ್ರಭಾವ ಬೀರುವುದು ಸಾರ್ವಜನಿಕ ಅಭಿಪ್ರಾಯ ಮೂಡಿಸಲು ಹೋಗುವುದು ಒಳ್ಳೆಯದಲ್ಲ.

ಪೊಲೀಸರ ತನಿಖೆಯನ್ನು ಪ್ರಶ್ನೆ ಮಾಡುವುದಿಲ್ಲ. ಮಧ್ಯಪ್ರವೇಶಿಸುವುದಿಲ್ಲ. ಮತ್ತೆ ನ್ಯಾಯಾಧೀಶರ ಮುಂದೆ 164 ಆಗಿದೆ. ಯಾವ್ಯಾವ ರೀತಿಯಲ್ಲಿ ತನಿಖೆ ಆಗಬೇಕೆಂದು ನ್ಯಾಯಾಧೀಶರು ಸೂಚನೆ ಕೊಡುತ್ತಾ ಹೋಗುತ್ತಾರೆ. ಆ ರೀತಿಯಲ್ಲಿ ತನಿಖೆ ನಡೆಯಲಿದೆ ಎಂದರಲ್ಲದೆ, ಪೊಲೀಸರು ನ್ಯಾಯಾಧೀಶರ ಮುಂದೆ ತನಿಖಾ ವರದಿ ಕೊಡುತ್ತಾರೆ. ನಮ್ಮ ಸರ್ಕಾರದಲ್ಲಿ ಯಾರೂ ಶರಣರನ್ನು ವಹಿಸಿಕೊಳ್ಳಲು ಹೋಗಲ್ಲ ಎಂದರು.

ಇನ್ನು ರಾಜ್ಯದಲ್ಲಿ ಸುರಿಯುವ ಮಳೆ ಕುರಿತಂತೆ ಮಾತನಾಡಿದ ಅವರು, ರಾಜ್ಯದ ಎಲ್ಲ ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದೇನೆ. ಇನ್ನು ಚಾಮರಾಜನಗರದಲ್ಲಿ ಸುರಿದ ಮಳೆಗೆ ಪ್ರತಿಕ್ರಿಯೆ ನೀಡಿದ ಅವರು ಈ ಸಂಬಂಧ ಮುಖ್ಯ ಇಂಜಿನಿಯರಿಗೆ ಹೋಗಿ ಪರಿಶೀಲಿನ ವರದಿ ನೀಡಲು ಹೇಳಿರುವುದಾಗಿ ತಿಳಿಸಿದ್ದಾರೆ.


Spread the love

Leave a Reply

Please enter your comment!
Please enter your name here