
ಮುಲ್ಕಿ ನಗರ ಗ್ರಾಮದಲ್ಲಿ ಯೂತ್ ಜೋಡೊ ಬೂತ್ ಜೋಡೊ ಕಾರ್ಯಕ್ರಮ
ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮುಲ್ಕಿ ನಗರ ಗ್ರಾಮದಲ್ಲಿ ಬುಧವಾರ “ಯೂತ್ ಜೋಡೊ ಬೂತ್ ಜೋಡೊ” ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ “ಭಾರತ್ ಜೋಡೊ” ಯಾತ್ರೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೋಹನ್ ಪಿ ಕೋಟ್ಯಾನ್, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಗಿರೀಶ್ ಆಳ್ವ, ಕೆಪಿವೈಸಿ ಪ್ರಧಾನ ಕಾರ್ಯದರ್ಶಿ ಮೇರಿಲ್ ರೇಗೊ, ಕೆಪಿವೈಸಿ ಕಾರ್ಯದರ್ಶಿ ಸರ್ಫರಾಜ್ ನವಾಝ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಮಲ್ಲಿ, ಗ್ರಾಮ ಪಂಚಾಯತ್ ಸದಸ್ಯರಾದ ಯೋಗೇಶ್, ಮುಲ್ಕಿ ಪ್ರಜಾಪ್ರತಿನಿಧಿ ಸಮಿತಿಯ ಅಧ್ಯಕ್ಷರಾದ ಜನಾರ್ದನ ಬಂಗೇರಾ, ಮುಖಂಡರ ಮಂಜುನಾಥ ಕಂಬಾರ, ಬಾಲಚಂದ್ರ, ಡಿಸಿಸಿ ಸದಸ್ಯರಾದ ಪುತ್ತುಬಾವ, ಬಶೀರ್ ಕುಳಾಯಿ, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್, ಮೋಕ್ಷ ಸಾಲಿಯಾನ್ ಮತ್ತು ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದರು.