ಮುಸ್ಲಿಂ ಬಾಂಧವರಿಂದ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Spread the love

ಮುಸ್ಲಿಂ ಬಾಂಧವರಿಂದ ಉಡುಪಿ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ಉಡುಪಿ: ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಈದ್ ಉಲ್ ಅದಾ ಬಕ್ರೀದ್ ಹಬ್ಬವನ್ನು ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ವಿಶೇಷ ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದರೊಂದಿಗೆ ಸಂಭ್ರಮದಿಂದ ಆಚರಿಸಿದರು.

ಮುಂಜಾನೆ ನಗರದ ಜಾಮೀಯಾ ಮಸೀದಿ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬದ ಸಾಮೂಹಿಕ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದ ಬಳಿಕ ಪರಸ್ಪರ ಶುಭಕೋರುವುದರ ಮೂಲಕ ಹಬ್ಬದ ಸಂಭ್ರಮವನ್ನು ಹಂಚಿಕೊಂಡರು.

ಕೊರೋನಾ ಕಾರಣದಿಂದಾಗಿ ಸತತ ಎರಡು ವರ್ಷಗಳ ಕಾಲ ಸರಳವಾಗಿ ಹಬ್ಬದ ಆಚರಣೆ ನಡೆದಿದ್ದು ಈ ಬಾರಿ ಪುಟಾಣಿಗಳು, ಮಕ್ಕಳು, ಹಿರಿಯರು ವೃದ್ಧರು ಸೇರಿ ಪ್ರತಿಯೊಬ್ಬರು ಶ್ರದ್ದಾ ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ಹಬ್ಬದ ಆಚರಣೆಗೆ ಅನುಕೂಲವಾಗುವಂತೆ ಮತ್ತು ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆಯುವ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿತ್ತು.

ಪವಿತ್ರ ಹಜ್ ಯಾತ್ರೆಯು ಇಸ್ಲಾಮಿನ ವಿಶ್ವ ಭ್ರಾತೃತ್ವದ ಸಂಕೇತವಾಗಿ ಹಾಗೂ ಬಲಿದಾನದ ನೆನಪಿಗಾಗಿ ಬಕ್ರೀದ್ ಆಚರಿಸಲಾಗುತ್ತದೆ .

ಜಾಮೀಯಾ ಮಸೀದಿಯಲ್ಲಿ ಮೌಲಾನಾ ಅವರು ತಮ್ಮ ಸಂದೇಶದಲ್ಲಿ ಸಂಕಷ್ಠದಲ್ಲಿರುವವರಿಗೆ ಸಹಾಯ ಮಾಡುವ ಮನೋಭಾವ ಜೀವನದಲ್ಲಿ ಪ್ರತಿಯೊಬ್ಬರು ಬೆಳೆಸಿಕೊಳ್ಳಬೇಕು, ಎಲ್ಲರೂ ಪ್ರೀತಿ ಒಗ್ಗಟ್ಟಿನಿಂದ ಸಮಾಜದಲ್ಲಿ ಶಾಂತಿಯುತವಾಗಿ ಬದುಕಬೇಕು ಎಂದು ಸಲಹೆ ನೀಡಿದರು.


Spread the love