ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ ಪ್ರಭಾಕರ ಭಟ್ ವಿರುದ್ದ ಕಾನೂನು ಕ್ರಮ ಜರುಗಿಸಿ – ರಮೀಝ್ ಹುಸೇನ್

Spread the love

ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ ಪ್ರಭಾಕರ ಭಟ್ ವಿರುದ್ದ ಕಾನೂನು ಕ್ರಮ ಜರುಗಿಸಿ – ರಮೀಝ್ ಹುಸೇನ್

ಉಡುಪಿ: ಮುಸ್ಲಿಂ ಸಮುದಾಯದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡುವುದರ ಮೂಲಕ ನಾಗರಿಕ ಸಮಾಜ ತಲೆತಗ್ಗಿಸುವಂತಹ ಹೇಳಿಕೆ ನೀಡಿ, ಮಹಿಳೆಯರ ಮನಸ್ಸಿಗೆ ನೋವು ಉಂಟು ಮಾಡಿದ ವಿಕೃತ ಮನಸ್ಸಿನ ಡಾ! ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸ ಬೇಕು ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಸರಕಾರಕ್ಕೆ ಮನವಿ ಮಾಡಿದ್ದಾರೆ

ಪದೇ ಪದೇ ಇಂತಹ ಪ್ರಚೋದನಕಾರಿ ಹೇಳಿಕೆ ನೀಡಿ ಸಮಾಜವನ್ನು ಒಡೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದು, ಭಾರತ ದೇಶದಲ್ಲಿ ಸೌಹಾರ್ದತೆಯಿಂದ ಬದುಕುತಿರುವ ನಾಗರಿಕ ಸಮಾಜದಲ್ಲಿ ಮುಸ್ಲಿಂ ಸಮುದಾಯದ ಮೇಲೆ ನಿರಂತರವಾಗಿ ದ್ವೇಷ ಸಾಧಿಸುವ ಹಾಗೂ ರಾಜ್ಯದ ಜನಗಳ ಸೌಹಾರ್ದಯುತ ಬದುಕಿಗೆ ಧಕ್ಕೆ ತರುವ ಇಂತಹ ಘಟನೆಗಳು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ .

ಪ್ರಭಾಕರ್ ಭಟ್ ರ ಹೇಳಿಕೆ ಇಡೀ ಮಹಿಳಾ ಸಮುದಾಯದಕ್ಕೆ ಅವಮಾನಿಸುವಂತಾಗಿದ್ದು ಇದನ್ನು ಧರ್ಮ, ಜಾತಿ ಭೇದ ಮರತೆು ರಾಜ್ಯದ ಮೂಲೆ ಮೂಲೆಗಳಲ್ಲಿ ಪ್ರತಿಭಟನೆ ಕೈಗೊಂಡಿದ್ದು ಪ್ರಭಾಕರ ಭಟ್ಟ ರ ಮೇಲೆ ಕಠಿಣ ಕಾನೂನು ಕ್ರಮ ಕೆೃಗೊಳ್ಳುಬೇಕು ಮತ್ತು ಕೋರ್ಟ್ ಅವರಿಗೆ ನೀಡಿದ ಮಧ್ಯಂತರ ಜಾಮೀನು ರದ್ದು ಪಡಿಸಿ ಆದಷ್ಟು ಬೇಗ ಬಂಧಿಸಬೇಕು , ಸುಪ್ರೀಮ್ ಕೋರ್ಟ್ ಇಂತಹ ಕೋಮುದ್ವೇಷದಿಂದ ಕೂಡಿದ ಹೇಳಿಕೆ ನೀಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಜರುಗಿಸುವಂತೆ ಸರಕಾರಕ್ಕೆ ಅದೇಶಿಸಿದೆ ಅದ್ದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಸಮಾಜಘಾತಕರನ್ನು ಹತ್ತಿಕ್ಕಲು ಈ ಕೂಡಲೇ ಕ್ರಮ ಜರಗಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಪ್ರಚೋದನಕಾರಿ ಹೇಳಿಕೆ ನೀಡುವ ವ್ಯಕ್ತಿಗಳನ್ನು ಹತ್ತಿಕ್ಕಲು ಸಾಧ್ಯ ಮತ್ತು ಇತರರಿಗೆ ಪಾಠವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love