ಮುಸ್ಲಿಮರ ವಿರುದ್ಧ ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿಯ ದ್ವೇಷ ಭಾಷಣ : ಪ್ರಕರಣ ದಾಖಲು

Spread the love

ಮುಸ್ಲಿಮರ ವಿರುದ್ಧ ಕುವೆಟ್ಟು ಗ್ರಾಪಂ ಅಧ್ಯಕ್ಷೆ ಭಾರತಿ ಶೆಟ್ಟಿಯ ದ್ವೇಷ ಭಾಷಣ : ಪ್ರಕರಣ ದಾಖಲು

ಬೆಳ್ತಂಗಡಿ: ಮುಸ್ಲಿಂ ಸಮೂದಾಯದ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ಹೊರವಲಯದ ಬಜ್ಪೆಯಲ್ಲಿ ಕೊಲೆಯಾದ ಸುಹಾಸ್ ಶೆಟ್ಟಿಯ ನುಡಿನಮನ ಕಾರ್ಯಕ್ರಮದಲ್ಲಿ, ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಂ ಸಮೂದಾಯದ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ವಿಡಿಯೋ ವೈರಲ್ ಆಗಿತ್ತು.

ಸಾಯಿರಾಮ್ ಫ್ರೆಂಡ್ಸ್ ಸಂಘಟನೆ ವತಿಯಿಂದ ಆಯೋಜಿಸಿದ್ದ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮದ ಸಭಾ ವೇದಿಕೆಯಲ್ಲಿ ಭಾರತಿ ಶೆಟ್ಟಿ, ಗುರುವಾಯನಕೆರೆಯಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚು. ಮುಸ್ಲಿಮರಲ್ಲಿ ವ್ಯಾಪಾರ, ವ್ಯವಹಾರ ಮಾಡಬಾರದು. ಅವರನ್ನು ಬಹಿಷ್ಕರಿಸಬೇಕು. ಗುರುವಾಯನಕೆರೆಯಲ್ಲಿ ಬೆಳಗ್ಗೆ ಬೇಗ ಮುಸ್ಲಿಂ ರಿಕ್ಷಾ ಚಾಲಕರೇ ಇರುತ್ತಾರೆ. ನಮ್ಮಲ್ಲಿ ಸರಿಯಾಗಿ ಮಾತಾನಾಡಿ ನಮಗೆ ಗೊತ್ತಿಲ್ಲದೆ ಅವರು ಮೋಸ ಮಾಡುತ್ತಾರೆ ಎನ್ನುವ ಭಾಷಣವನ್ನು ಮಾಡಿದ್ದಾರೆ. ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ ಧರ್ಮ ಧರ್ಮಗಳ ಮಧ್ಯೆ ಕೋಮು ಸಂಘರ್ಷ ಸೃಷ್ಟಿಸುವ ಉದ್ದೇಶದಿಂದ ಮುಸ್ಲಿಂ ಸಮೂದಾಯವನ್ನು ಅವಹೇಳನಕಾರಿಯಾಗಿ ಬಿಂಬಿಸಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಇರುವತ್ರಾಯ ಅವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡಿರುವ ಬೆಳ್ತಂಗಡಿ ಪೊಲೀಸರು ಮೇ.14 ರಂದು BNS 2023 (u/s 196(1)(a) ಅಡಿಯಲ್ಲಿ ಭಾರತಿ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments