ಮೂಡಬಿದರೆ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲಿನಲ್ಲಿ ಆತ್ಮಹತ್ಯೆ

ಮೂಡಬಿದರೆ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲಿನಲ್ಲಿ ಆತ್ಮಹತ್ಯೆ

ಮೂಡಬಿದರೆ: ಮೂಡಬಿದರೆಯ ಪ್ರತಿಷ್ಟಿತ ಕಾಲೇಜೊಂದರ 18 ವರ್ಷ ವಯಸ್ಸಿನ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತ ಯುವತಿಯನ್ನು ಬೆಂಗಳೂರು ಆನೇಕಲ್ ನಿವಾಸಿ ವಿನುತಾ ಎಂದು ಗುರುತಿಸಲಾಗಿದೆ.

ಸಪ್ಟೆಂಬರ್ 12 ರಂದು ಬೆಳಿಗ್ಗೆ 7 ಗಂಟೆಯ ವೇಳೆಗೆ ವಿನುತಾ ಹಾಸ್ಟೆಲಿನ ಫ್ಯಾನಿಗೆ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೂಡಬಿದರೆ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.