ಮೂಡಬಿದರೆ: ಮಗಳ ಮೇಲೆ ತಂದೆಯಿಂದ ಅತ್ಯಾಚಾರ- ಬಂಧನ

Spread the love

ಮೂಡಬಿದರೆ: ಮಗಳ ಮೇಲೆ ತಂದೆಯಿಂದ ಅತ್ಯಾಚಾರ- ಬಂಧನ

ಮೂಡಬಿದರೆ : ಮಗಳ ಮೇಲೆ ಅತ್ಯಾಚಾರ ಮಾಡುತ್ತಿದ್ದ ತಂದೆಯನ್ನು ಪೋಲಿಸರು ಬಂಧಿಸಿದ ಘಟನೆ ಮೂಡಬಿದರೆಯಲ್ಲಿ ನಡೆದಿದೆ.

ಮೂಡಬಿದರೆ ಸಮೀಪದ ಪುಚ್ಚೆಮೊಗರು ಎಂಬಲ್ಲಿನ ಗಿರಣಿಯೊಂದರಲ್ಲಿ ಕೆಲಸಕ್ಕಿದ್ದ ಈತ, ಜಾರ್ಖಂಡ್ ಮೂಲದ ಪತ್ನಿ ಹಾಗು ಮಗಳೊಂದಿಗೆ ಅಲ್ಲಿಯೇ ಸಮೀಪದ ಮನೆಯೊಂದರಲ್ಲಿ ವಾಸವಾಗಿದ್ದ.

ಈತನ 14 ವರ್ಷದ ಮಗಳು ಇತ್ತೀಚೆಗೆ ರಾತ್ರಿ ಮನೆಯ ಹೊರಗೆ ಮಲಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಕುರಿತು ಮೂಡಬಿದಿರೆ ಪೊಲೀಸರು ಬಾಲಕಿಯ ವಿಚಾರಣೆ ನಡೆಸಿದಾಗ ಸರಿಯಾದ ಕಾರಣ ತಿಳಿಸಿರಲಿಲ್ಲ. ಪರಿಣಾಮ ಆಕೆಯನ್ನು ಮಂಗಳೂರಿನ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಬಾಲಕಿಯನ್ನು ವಿಚಾರಣೆಗೆ ಒಳಪಡಿಸಿದಾಗ ತಂದೆ ತನ್ನ ಮೇಲೆ ಅತ್ಯಾಚಾರದ ನಡೆಸಿದ್ದಾರೆ ಎಂದು ಆರೋಪಿಸಿದ್ದಾಳೆ.

ಬಾಲಕಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಬಾಲಕಿಯ ತಂದೆಯ ವಿರುದ್ಧ ಮೂಡಬಿದಿರೆ ಪೊಲೀಸರು ಪೊಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಆರೋಪಿ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ, ಬಂಧಿಸಿದ್ದಾರೆ.


Spread the love