ಮೂಡುಬಿದಿರೆ : ಖಾಸಗಿ ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

Spread the love

ಮೂಡುಬಿದಿರೆ : ಖಾಸಗಿ ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

ಮೂಡುಬಿದಿರೆ : ಖಾಸಗಿ ಬಸ್ ವೊಂದು ದ್ವಿಚಕ್ರ ವಾಹನಕ್ಕೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಮಂಗಳೂರು- ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ ತೋಡಾರು ಎಂಬಲ್ಲಿ ಶುಕ್ರವಾರ ವರದಿಯಾಗಿದೆ.

ತೋಡಾರು ನಿವಾಸಿ ರಿಫಾಝ್ (19) ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಮೂಡುಬಿದಿರೆಯಲ್ಲಿ ಹಣ್ಣು ಹಂಪಲು ಮಾರಾಟದ ಅಂಗಡಿಯಲ್ಲಿ ಕೆಲಸ‌ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಅಭಿಮಾನ್ ಎಂಬ ಹೆಸರಿನ ಖಾಸಗಿ ಬಸ್ ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ. ಸರ್ವಿಸ್ ರಸ್ತೆಯ ಮೂಲಕ ಬರಬೇಕಾಗಿದ್ದ ಬಸ್ ವಿರುದ್ಧ ದಿಕ್ಕಿನಲ್ಲಿ ಅತಿಯಾದ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ‌ ಮಾಡಿಕೊಂಡು ಬಂದು ರಿಫಾಝ್ ಸಂಚರಿಸುತ್ತದ್ದ ದ್ವಿಚಕ್ರ ವಾಹನಕ್ಕೆ ಮುಖಾಮುಖಿಯಾಗಿ ಢಿಕ್ಕಿ ಹೊಡೆಯಿತೆನ್ನಲಾಗಿದೆ.

ಘಟನೆಯಿಂದ ಗಂಭೀರ ಗಾಯಗೊಂಡಿದ್ದ ರಿಫಾಝ್ ನನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.

ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Subscribe
Notify of

0 Comments