ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2022- ಆಳ್ವಾಸ್ ತಂಡ ಪ್ರಾಬಲ್ಯ

Spread the love

ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2022- ಆಳ್ವಾಸ್ ತಂಡ ಪ್ರಾಬಲ್ಯ

ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೂಡುಬಿದಿರೆ ತಾಲೂಕು ಪಂಚಾಯತ್, ಮೂಡುಬಿದಿರೆ ಪುರಸಭೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿμÁ್ಠನ ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವರಾಜ ಮೈದಾನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ನಡೆಯಿತು. ತಾಲೂಕಿನ ವಿವಿಧ ಕಾಲೇಜು ಹಾಗೂ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಕ್ರೀಡೆಯಲ್ಲಿ ಭಾಗವಹಿಸಿದರು.

ಸಭಾ ಕಾರ್ಯಕ್ರಮದ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದ ಮುಲ್ಕಿ ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್, ಪ್ರತಿಭಾನ್ವಿತರಿಗೆ ಅವಕಾಶ ನೀಡಿ ಪೆÇ್ರೀತ್ಸಾಹಿಸಲು ಇಂತಹ ಕ್ರೀಡಾಕೂಟಗಳು ಪೂರಕವಾಗಿರುತ್ತದೆ. ಶ್ರದ್ಧೆ ಮತ್ತು ಕ್ರೀಡಾಸ್ಪೂರ್ತಿಯಿಂದ ಭಾಗವಹಿಸುವುದರಿಂದ ಯಶಸ್ವಿಯಾಗಿ ಗುರಿ ತಲುಪಲು ಸಾಧ್ಯ ಎಂದರು.

ಮೂಡುಬಿದಿರೆ ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ಮತ್ತು ಆಳ್ವಾಸ್ ಶಿಕ್ಷಣ ಪ್ರತಿμÁ್ಠನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಮೂಡುಬಿದಿರೆ ತಾಲೂಕಿನ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಕ್ರೀಡಾಜ್ಯೋತಿಯನ್ನು ಬೆಳಗಿದರು. ರಾಷ್ಟ್ರಮಟ್ಟದ ಗುಡ್ಡಗಾಡು ಓಟಗಾರ್ತಿ ಚೈತ್ರಾ ದೇವಾಡಿಗ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ಸಂದರ್ಭ ಮೂಡುಬಿದಿರೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಯಾವತಿ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕ ಮಂಜು ಸ್ವಾಗತಿಸಿದರೆ, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ನಾಗೇಶ್ ವಂದಿಸಿದರು. ದೈಹಿಕ ಶಿಕ್ಷಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

ಕ್ರೀಡಾಕೂಟದ ಫಲಿತಾಂಶ:
ಕಬಡ್ಡಿ ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ ಪ್ರಥಮ, ಅಳಿಯೂರು ತಂಡ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಡಿಗ್ರಿ ತಂಡ ಪ್ರಥಮ, ಆಳ್ವಾಸ್ ಪಿಯು ತಂಡ ದ್ವಿತೀಯ, ಥ್ರೋಬಾಲ್ ಪುರುಷರ ವಿಭಾಗದಲ್ಲಿ ಇರುವೈಲು ತಂಡ ಪ್ರಥಮ, ಜೈನ್ ಪಿಯು ತಂಡ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ ಪ್ರಥಮ, ಜೈನ್ ಪಿಯು ತಂಡ ದ್ವಿತೀಯ, ಫುಟ್‍ಬಾಲ್ ಮಹಿಳೆಯರ ವಿಭಾಗದಲ್ಲಿ ಸೈಂಟ್ ಜೋಸೆಫ್ ‘ಎ’ ತಂಡ ಪ್ರಥಮ, ಸೈಂಟ್ ಜೋಸೆಫ್ ‘ಬಿ’ ತಂಡ ದ್ವಿತೀಯ, ಖೋಖೋ ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ ಪ್ರಥಮ, ನೀರ್‍ಕೆರೆ ತಂಡ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ತಂಡ ಪ್ರಥಮ, ನೀರ್‍ಕೆರೆ ತಂಡ ದ್ವಿತೀಯ, ವಾಲಿಬಾಲ್ ಪುರುಷರ ವಿಭಾಗದಲ್ಲಿ ಆಳ್ವಾಸ್ ತಂಡ ಪ್ರಥಮ, ಜೈನ್ ಪಿಯು ತಂಡ ದ್ವಿತೀಯ, ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಪ್ರಥಮ, ಜೈನ್ ಪಿಯು ತಂಡ ದ್ವಿತೀಯ ಸ್ಥಾನ ಪಡೆಯಿತು. ಅಥ್ಲೆಟಿಕ್ಸ್ ಪುರುಷರ ಹಾಗೂ ಮಹಿಳೆಯರ ವಿಭಾಗದ ಎಲ್ಲಾ ಕ್ರೀಡೆಯಲ್ಲೂ ಪದಕ ಜಯಿಸಿ ಆಳ್ವಾಸ್ ಚಾಂಪಿಯನ್ ಆಗಿ ಹೊರಹೊಮ್ಮಿತು.

ಅಥ್ಲೆಟಿಕ್ಸ್ ನಲ್ಲಿ ವೈಯಕ್ತಿಕ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ತಂಡಗಳು ಜಿಲ್ಲಾಮಟ್ಟದ ಕ್ರೀಡಾ ಕೂಟಕ್ಕೆ ಅರ್ಹತೆ ಪಡೆದುಕೊಂಡಿವೆ.


Spread the love