
Spread the love
ಮೂಡುಬಿದಿರೆ: ಬಾವ-ಬಾವಮೈದುನರ ನಡುವಿನ ಗಲಾಟೆ – ಓರ್ವನ ಕೊಲೆ
ಮೂಡುಬಿದಿರೆ: ಕ್ಷುಲ್ಲಕ ವಿಚಾರವಾಗಿ ಬಾವ-ಬಾವಮೈದುನರ ನಡುವಿನ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಇವರಿಬ್ಬರ ಮನೆಗಳು ಅಕ್ಕಪಕ್ಕದಲ್ಲಿದ್ದು ಸಣ್ಣ ಮಕ್ಕಳೊಳಗಿನ ವೈಮನಸ್ಸಿನ ವಿಚಾರವಾಗಿ ಇಂದು ಬೆಳಗ್ಗೆ ಜಮಾಲ್ ಮತ್ತು ಸುಹೈಬ್ ನಡುವೆ ಮಾತಿಕ ಚಕಮಕಿ ನಡೆದಿದೆ. ಇದು ತಾರಕಕ್ಕೇರಿದಾಗ ಜಮಾಲ್ ಹೊಟ್ಟೆಗೆ ಆರೋಪಿ ಸುಹೈಬ್ ಚಾಕುವಿನಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಸುಹೈಬ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಮೂಡುಬಿದಿರೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Spread the love