ಮೂಡುಬಿದಿರೆ| ಹಿಂಜಾವೇ ಮುಖಂಡನ ಮೊಬೈಲ್‌ನಲ್ಲಿ 50ರಷ್ಟು ಅಶ್ಲೀಲ ವೀಡಿಯೊ ಪತ್ತೆ: ಪ್ರಕರಣ ದಾಖಲು

Spread the love

ಮೂಡುಬಿದಿರೆ| ಹಿಂಜಾವೇ ಮುಖಂಡನ ಮೊಬೈಲ್‌ನಲ್ಲಿ 50ರಷ್ಟು ಅಶ್ಲೀಲ ವೀಡಿಯೊ ಪತ್ತೆ: ಪ್ರಕರಣ ದಾಖಲು

ಮೂಡುಬಿದಿರೆ: ಹಿಂದೂ ಜಾಗರಣ ವೇದಿಕೆಯ ಮುಖಂಡರೊಬ್ಬರ ಮೊಬೈಲ್ ಫೋನ್‌ನಲ್ಲಿ 50ರಷ್ಟು ಅಶ್ಲೀಲ ವೀಡಿಯೊಗಳು ಪತ್ತೆಯಾಗಿರುವ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂಜಾವೇ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

2024ರಲ್ಲಿ ಮೂಡುಬಿದಿರೆ ತಾಲೂಕಿನ ಮಿಜಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದಿದ್ದ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ಸುಮಿತ್ರಾ ಮತ್ತು ಅವರ ಪುತ್ರಿ ಸಾನ್ವಿ ಅವರಿಗೆ ಬಸ್ ಮಾಲಕನಿಗೆ ಒತ್ತಡ ಹಾಕಿ ಸಮಿತ್ ರಾಜ್ 5 ಲಕ್ಷ ರೂ. ಪರಿಹಾರ ತೆಗೆಸಿಕೊಟ್ಟಿದ್ದ ಎನ್ನಲಾಗಿದೆ.

ಇದೇ ವಿಚಾರವಾಗಿ ಖಾಸಗಿ ಬಸ್ ಮಾಲಕ ಸಮಿತ್ ರಾಜ್ ವಿರುದ್ಧ ಬೆದರಿಕೆ ಮತ್ತು ಅಕ್ರಮ ಹಣ ವಸೂಲಿ ಮಾಡಿರುವ ಆರೋಪದಲ್ಲಿ 2024ರಲ್ಲಿ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಇತ್ತೀಚಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಈ ಪ್ರಕರಣದ ವಿಚಾರಣೆ ನಡೆಸುವಂತೆ ಮೂಡುಬಿದಿರೆ ಪೊಲೀಸರಿಗೆ ಸೂಚಿಸಿದ್ದರು. ಅದರಂತೆ ಪ್ರಕರಣದ ಆರೋಪಿ ಸಮೀತ್ ರಾಜ್ ಧರೆಗುಡ್ಡೆಯನ್ನು ಬಂಧಿಸಿ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಜೂ.26ರಂದು ಠಾಣೆಗೆ ಕರೆ ತಂದಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಸಮಿತ್‌ರಾಜ್‌ನ ಮೊಬೈಲ್ ಫೋನನ್ನು ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿರುವ ಸೆನ್ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಈ ವೇಳೆ ಮೊಬೈಲ್‌ನ ದತ್ತಾಂಶಗಳನ್ನು ರಿಟ್ರೈವ್ ಮಾಡಿದಾಗ ಆರೋಪಿ ಸುಮಿತ್‌ರಾಜ್ ಮಹಿಳೆಯೊಂದಿಗಿನ ಅಶ್ಲೀಲ ವೀಡಿಯೊಗಳು ಮತ್ತು ವೆಬ್‌ಸೈಟ್‌ಗಳಿಂದ ಡೌನ್‌ಲೋಡ್ ಮಾಡಲಾಗಿದ್ದ ಸುಮಾರು 40ರಿಂದ 50 ಅಶ್ಲೀಲ ವೀಡಿಯೊಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು ಈ ವೀಡಿಯೊ ತುಣುಕುಗಳನ್ನು ಪ್ರಸಾರ ಮಾಡುವ ಅಥವಾ ಇನ್ಯಾರಿಗೋ ಕಳುಹಿಸಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಆತನ ವಿರುದ್ಧ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments