ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸ್ ದಾಳಿ ; ಆರೋಪಿಗಳ ಬಂಧನ
ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.
ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆನ್ನುವ ಮಾಹಿತಿ ತಿಳಿದ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆ ಮನೆಗೆ ದಾಳಿ ನಡೆಸಿದೆ.
ಈ ವೇಳೆ ಲೈಂಗಿಕ ಕ್ರಿಯೆಗೆ ಬಳಸುವ ಕೆಲವೊಂದು ವಸ್ತುಗಳೂ ಅಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದ್ದು, ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು ಈ ಕೃತ್ಯಕ್ಕೆ ಉಪಯೋಗಿಸುತ್ತಿದ್ದನೆನ್ನಲಾಗಿದೆ.
ಆರೋಪಿಗಳ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರನ್ನು ಮತ್ತು ಆರೋಪಿಗಳನ್ನು ಠಾಣೆಗೆ ತಂದು ವಿಚಾರಿಸಿದಾಗ ಎಲ್ಲ ವಿಚಾರಗಳನ್ನೂ ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಅವರ ಸಮಯಪ್ರಜ್ಞೆ ಮತ್ತು ಆರೋಪಿಗಳನ್ನು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.