
Spread the love
ಮೂಡುಶೆಡ್ಡೆ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ಘರ್ಷಣೆ – ನಾಲ್ವರ ಬಂಧನ
ಮಂಗಳೂರು: ಮತದಾನದ ಬಳಿಕ ಮೂಡುಶೆಡ್ಡೆಯಲ್ಲಿ ನಡೆದ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಘರ್ಷಣೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪುನೀತ್ (33), ನಿಶಾಂತ್ ಕುಮಾರ್ (24), ರಾಕೇಶ್(28) ಮತ್ತು ದಿನೇಶ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಬುಧವಾರ ಮತದಾನದ ಬಳಿಕ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ಪೊಲೀಸ್ ಸಿಬಂದಿ ಕೂಡ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಪೊಲೀಸ್ ವಾಹನ ಕೂಡ ಜಖಂಗೊಂಡಿತ್ತು.
ಈ ಬಗ್ಗೆ 5 ಪ್ರಕರಣಗಳು ದಾಖಲಾಗಿದ್ದು, 5 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Spread the love