ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಗೆಲುವು

Spread the love

ಮೂಡು ಪೆರಂಪಳ್ಳಿ ವಾರ್ಡ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಗೆಲುವು

ಉಡುಪಿ: ನಗರಸಭೆಯ ಮೂಡು ಪೆರಂಪಳ್ಳಿ ವಾರ್ಡಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜಾ ಜಯಗಳಿಸಿದ್ದಾರೆ.

ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರುತಿ ಅವರನ್ನು ಕಣಕ್ಕಿಳಿಸಿದರೆ ಬಿಜೆಪಿ ಪಕ್ಷ ಕ್ರಿಶ್ಚಿಯನ್ ಅಭ್ಯರ್ಥಿಯಾಗಿ ಅನಿತಾ ಬೆಲಿಂಡಾ ಡಿಸೋಜಾರನ್ನು ಕಣಕ್ಕಿಳಿಸಿದ್ದು 6 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸುವುದರ ಮೂಲಕ 10 ವರ್ಷಗಳ ಬಳಿಕ ಕಾಂಗ್ರೆಸ್ ಮಡಿಲಲ್ಲಿ ಇದ್ದ ಮೂಡುಪೆರಂಪಳ್ಳಿ ವಾರ್ಡ್ ಬಿಜೆಪಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ.

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರಿಗೆ ಪ್ರತಿಷ್ಠೆಯಾಗಿದ್ದ ಚುನಾವಣೆಯಲ್ಲಿ ಪಕ್ಷದ ಎಲ್ಲಾ ನಾಯಕರು ಒಟ್ಟಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.


Spread the love