ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಜಯ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

Spread the love

ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಜಯ; ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ

ಉಡುಪಿ: ರಾಜಸ್ಥಾನ ಮಧ್ಯಪ್ರದೇಶ, ಛತ್ತೀಸ್ ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಜಯ ಸಾಧಿಸಿದ ಹಿನ್ನಲೆಯಲ್ಲಿ ಮಂಗಳವಾರ ಪಕ್ಷದ ಕಾರ್ಯಕರ್ತರು, ನಾಯಕರು ವಿಜಯೋತ್ಸವ ಆಚರಿಸಿದರು.

ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ಪರ ಘೋಷಣೆಗಳನ್ನು ಕೂಗಿದ ಕಾರ್ಯಕರ್ತರು ನಗರದ ಪ್ರಮುಖ ರಸ್ತೆಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಕಾರ್ಯದರ್ಶಿ  ನರಸಿಂಹ ಮೂರ್ತಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಕಾಂಗ್ರೆಸ್ ನಾಯಕರಾದ ಜನಾರ್ದನ ಭಂಡಾರ್ ಕರ್, ಕೃಷ್ಣಮೂರ್ತಿ ಆಚಾರ್ಯ, ಸತೀಶ್ ಅಮೀನ್ ಪಡುಕೆರೆ, ಗಣೇಶ್ ನೇರ್ಗಿ, ಸದಾಶಿವ ಕಟ್ಟೆಗುಡ್ಡೆ, ಶೇಖರ್ ಜಿ ಕೋಟ್ಯಾನ್, ನಾರಾಯಣ ಕುಂದರ್, ಶರತ್ ಭಂಡಾರಿ ಹಾಗೂ ಇತರರು ಉಪಸ್ಥಿತರಿದ್ದರು.


Spread the love